Tuesday, July 7, 2026
spot_imgspot_img
spot_imgspot_img

ಸುಳ್ಯ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಬ್ರಿಡ್ಜ್ ಮ್ಯಾನ್ ಆಫ್ ಇಂಡಿಯಾ ಎಂದೇ ಪ್ರಸಿದ್ಧಿಯಾದ ‘ ಡಾ. ಗಿರೀಶ್ ಭಾರದ್ವಾಜ್ ನಿಧನ

- Advertisement -
- Advertisement -

ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ ಅವರು ಮಂಗಳವಾರ(ಜು.7) ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಸುಮಾರು 76 ವರ್ಷ ವಯಸ್ಸಾಗಿತ್ತು.

ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಕೆಲದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ಕೊನೆಯುಸಿರೆಳೆದರು. ಭಾರತದಾದ್ಯಂತ ಹಳ್ಳಿ ಹಳ್ಳಿಗಳಲ್ಲಿ 125 ಕ್ಕಿಂತ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿದ ಅವರಿಗೆ ಸೇತು ಬಂಧು ಮತ್ತು ಬ್ರಿಡ್ಜ್ಮ್ಯಾನ್ ಆಫ್ ಇಂಡಿಯಾ ಎಂದು ಹೆಸರು ಬಂದಿದೆ. 2017ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.

ಡಾ.ಗಿರೀಶ್‌ ಭಾರದ್ವಾಜ ಅವರು ತಮ್ಮ ಮೊದಲ ಸೇತುವೆಯನ್ನು 1989 ರಲ್ಲಿ ದಕ್ಷಿಣ ಕನ್ನಡದ ಅರಂಬೂರಿನಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ನಿರ್ಮಿಸಿದರು. ಕೇರಳದಲ್ಲಿ ಸುಮಾರು ಮೂವತ್ತು ಸೇತುವೆಗಳನ್ನು ನಿರ್ಮಿಸಿದ ಅವರು, ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಎರಡು ಸೇತುವೆಗಳನ್ನು ನಿರ್ಮಿಸಿದ್ದಾರೆ. ಉಳಿದವು ಕರ್ನಾಟಕದ ವಿವಿಧ ಭಾಗಗಳಲ್ಲಿವೆ.

- Advertisement -

Related news

error: Content is protected !!