Tuesday, July 7, 2026
spot_imgspot_img
spot_imgspot_img

ಬೆಂಗಳೂರು:ಹಿಟ್ & ರನ್‌ಗೆ 28 ವರ್ಷದ ಯುವಕ ಬಲಿ; ಬೈಕ್‌ಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್

- Advertisement -
- Advertisement -

ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣದಲ್ಲಿ 28 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರದ ಚಿಕ್ಕಬಾಣಾವರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಪಯ್ಯನಗರ ಬಳಿ ನಡೆದಿದೆ.

28 ವರ್ಷದ ವಿನೋದ್ ಮೃತ ಯುವಕ. ವಿನೋದ್ ತನ್ನ ಅಣ್ಣನ ಜೊತೆ ಸೇರಿ ಮಾದನಾಯಕನಹಳ್ಳಿಯಲ್ಲಿ ಬೇಕರಿ ನಡೆಸುತ್ತಿದ್ದ. ಪ್ರತಿದಿನದಂತೆ ಅಂಗಡಿ ಮುಚ್ಚಿಕೊಂಡು ಹೆಸರಘಟ್ಟದಲ್ಲಿರುವ ಮನೆಗೆ ಆಕ್ಟಿವಾ ಬೈಕ್‌ನಲ್ಲಿ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಕೆಂಪಯ್ಯನಗರ ಬಳಿ ಎದುರಿನಿಂದ ಬಂದ ಟಿಟಿ ವಾಹನ ವಿನೋದ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿನೋದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ವಾಹನ ಚಾಲಕ ಸ್ಥಳದಲ್ಲೇ ನಿಲ್ಲದೆ ಟಿಟಿ ವಾಹನದೊಂದಿಗೆ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಾಣಾವರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಡಿಕ್ಕಿ ಹೊಡೆದು ಪರಾರಿಯಾಗಿರುವ ಟಿಟಿ ವಾಹನ ಹಾಗೂ ಚಾಲಕನಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದು, ಸಿಸಿಟಿವಿ ದೃಶ್ಯಗಳು ಸೇರಿದಂತೆ ಲಭ್ಯವಿರುವ ಸಾಕ್ಷ್ಯಗಳ ಆಧಾರದಲ್ಲಿ ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!