- Advertisement -
- Advertisement -


ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಸರಣಿ ಕಳ್ಳತನ ಮಾಡುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 38/2025, 39/2026, 41/2026, 123/2026 ಹಾಗೂ 126/2026ರಂತೆ ಒಟ್ಟು ಐದು ಕಳ್ಳತನ ಪ್ರಕರಣಗಳು ದಾಖಲಾಗಿದ್ದವು.

ಪ್ರಕರಣಗಳ ತನಿಖೆ ನಡೆಸಿದ ಪೊಲೀಸರು ಕಾಸರಗೋಡು ಜಿಲ್ಲೆಯ ಚರ್ಕಳ ನಿವಾಸಿ ಅಬ್ದುಲ್ ಶಮೀರ್ ಪಿ.ಎ. (50) ಹಾಗೂ ಮುಟ್ಟತೋಡಿ ನಿವಾಸಿ ಅಬ್ದುಲ್ ಮಜಿದ್ (33) ಅವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ 10 ಲಾರಿ ಬ್ಯಾಟರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಪ್ರಕರಣದ ಕುರಿತು ವಿಟ್ಲ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

- Advertisement -








