- Advertisement -
- Advertisement -

ವಿಟ್ಲ: ಕಳ್ಳತನ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯ ಅ.ಕ್ರ. 204/2018ರ ಕಳ್ಳತನ (ಐಪಿಸಿ ಸೆಕ್ಷನ್ 379) ಪ್ರಕರಣದ ಆರೋಪಿಯಾಗಿರುವ ಬೆಳ್ತಂಗಡಿ ನಿವಾಸಿ ರಾಜೇಶ್ (41) ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದನು.
ಈ ಹಿನ್ನೆಲೆಯಲ್ಲಿ ವಿಟ್ಲ ಠಾಣೆಯ ಎಎಸ್ಐ ಜಯರಾಮ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿಪಿಸಿ ವೆಂಕಪ್ಪ ಹಾಗೂ ಸಿಪಿಸಿ ಶಿವಾನಂದ ಅವರು ಜುಲೈ 6ರಂದು ಮಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದರು.ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -








