Sunday, July 12, 2026
spot_imgspot_img
spot_imgspot_img

ನಾಪತ್ತೆಯಾಗಿದ್ದ ಸುಳ್ಯದ ಯುವಕ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪತ್ತೆ!

- Advertisement -
- Advertisement -

ಬೆಂಗಳೂರಿನ ಸರ್ವಿಸ್ ಸ್ಟೇಷನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಝುಬೈರ್, “ಊರಿಗೆ ಹೋಗುತ್ತಿದ್ದೇನೆ” ಎಂದು ತಿಳಿಸಿ ಕೆಲಸದ ಸ್ಥಳದಿಂದ ಹೊರಟಿದ್ದ. ಆದರೆ ಆತ ಊರಿಗೂ ತಲುಪದೇ, ಕೆಲಸದ ಸ್ಥಳಕ್ಕೂ ಮರಳದೇ ಇದ್ದ ಹಿನ್ನೆಲೆಯಲ್ಲಿ ಆತ ನಾಪತ್ತೆಯಾಗಿರುವ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಯುವಕನ ಪತ್ತೆಗಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶದ ಯುವಕರ ತಂಡವೂ ವ್ಯಾಪಕ ಹುಡುಕಾಟ ನಡೆಸಿತ್ತು ಎಂದು ತಿಳಿದು ಬಂದಿದೆ

ಇದೀಗ ತಡರಾತ್ರಿ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಝುಬೈರ್ ಪತ್ತೆಯಾಗಿದ್ದು, ಆತ ಸುರಕ್ಷಿತವಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಯುವಕ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಬಂಧು-ಬಳಗದವರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!