- Advertisement -
- Advertisement -




ಹುಬ್ಬಳ್ಳಿ: ಪತ್ನಿಯನ್ನು ಹೆಲ್ಮೆಟ್ನಿಂದ ಹೊಡೆದು ಪತಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿ ಹೊರವಲಯ ತಾರಿಹಾಳ ಗ್ರಾಮದಲ್ಲಿ ನಡೆದಿದೆ.
ಮೂಲತಃ ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗರತ್ನ ಹಳೆಮನಿ(19) ಕೊಲೆಯಾದ ಪತ್ನಿ. ಶಿವರಾಜ್ ಕೊಲೆ ಮಾಡಿದ ಪತಿ ಎನ್ನಲಾಗಿದೆ.
ಕಳೆದ ಫೆಬ್ರವರಿಯಲ್ಲಿ ವಿವಾಹವಾಗಿದ್ದ ಈ ದಂಪತಿ ತಾರಿಹಾಳ ಗ್ರಾಮದಲ್ಲಿ ವಾಸವಾಗಿದ್ದರು. ಇಂದು ಬೆಳಿಗ್ಗೆ ಗಂಡ-ಹೆಂಡತಿ ನಡುವಿನ ವಾಗ್ವಾದ ಶುರುವಾಗಿತ್ತು. ಬಳಿಕ ಗಲಾಟೆ ತಾರಕಕ್ಕೇರಿದ್ದು, ಪತಿ ಶಿವರಾಜ್ ಹೆಲ್ಮೆಟ್ನಿಂದ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ನಾಗರತ್ನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ಗುಂಜನ್ ಆರ್ಯ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕೊಲೆಗೆ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.
- Advertisement -








