Wednesday, July 8, 2026
spot_imgspot_img
spot_imgspot_img

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ: ಅರ್ಜಿಸಲ್ಲಿಸಲು ಡಿ.31ರ ವರೆಗೆ ಅವಕಾಶ

- Advertisement -
- Advertisement -

ಬೆಂಗಳೂರು: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳನ್ನು ಪ್ರೋತ್ಸಾಹಿಸುವುದಕ್ಕಾಗಿ 2026-27ನೇ ಸಾಲಿನ ಶೈಕ್ಷಣಿಕ ಧನ ಸಹಾಯಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಡಿ.31ರ ವರೆಗೆ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿದೆ.ಪ್ರಸ್ತುತ ಸ್ನಾತಕೋತ್ತರ, ಪದವಿ, ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿರುವ ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸುವ ಕಾರ್ಮಿಕ ಪೋಷಕರ ಮಾಸಿಕ ವೇತನವು 35ಸಾವಿರ ರೂ. ಮೀರಿರಬಾರದು. ಇದರೊಂದಿಗೆ ಒಂದೇ ಕುಟುಂಬದ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಶೈಕ್ಷಣಿಕ ಧನ ಸಹಾಯ ಲಭ್ಯವಿರಲಿದ್ದು, ಸಾಮಾನ್ಯ ವರ್ಗದ ವಿದ್ಯಾರ್ಥಿ ಶೇ.50ರಷ್ಟು ಹಾಗೂ ಎಸ್‌ಸಿ-ಎಸ್‌ಟಿ ವರ್ಗದವರಾಗಿದ್ದರೆ ಶೇ.45ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು www.klwbapps.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ನಗರದ ಯಶವಂತಪುರದ ಮತ್ತಿಕೆರೆ ಮುಖ್ಯರಸ್ತೆಯಲ್ಲಿರುವ ಕಾರ್ಮಿಕ ಕಲ್ಯಾಣ ಭವನದಲ್ಲಿರುವ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಕಚೇರಿಗೆ ಖುದ್ದಾಗಿ ಭೇಟಿ ನೀಡಬಹುದು.

ಅಥವಾ ದೂ: 080-2347 5188,82772 91175, 82771 20505ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!