Thursday, July 9, 2026
spot_imgspot_img
spot_imgspot_img

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿತ ಬಂಧನ

- Advertisement -
- Advertisement -


ಮಂಗಳೂರು: ಸುಮಾರು 12 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (LPC) ಆರೋಪಿಯನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಜಪ್ಪು ನಿವಾಸಿ ಶಕೀಲ್ (33) ಎಂದು ಗುರುತಿಸಲಾಗಿದೆ.


ಆರೋಪಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2014ರ ಅಪರಾಧ ಸಂಖ್ಯೆ 236/2014ರಡಿ ಅಪಹರಣ ಹಾಗೂ ಡಕಾಯಿತಿ (IPC 364(A), 395 ಹಾಗೂ 34) ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗಿದ ದಿನದಿಂದಲೂ ಆರೋಪಿ ತಲೆಮರೆಸಿಕೊಂಡಿದ್ದರಿಂದ, ಆತನ ವಿರುದ್ಧ Absconding Charge Sheet ಸಲ್ಲಿಸಲಾಗಿತ್ತು. ಬಳಿಕ ನ್ಯಾಯಾಲಯವು ಪ್ರಕರಣವನ್ನು ಎಲ್‌ಪಿಸಿ (Long Pending Case) ಎಂದು ಪರಿವರ್ತಿಸಿತ್ತು.
ಆರೋಪಿ ಇರುವಿಕೆ ಕುರಿತು ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪುಟ್ಟರಾಮ (HC-465) ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮಲಿಕ್ ಜಾನ್ (PC-2367) ಅವರು ನಂದಿಗುಡ್ಡ ಸರ್ಕಲ್‌ ಬಳಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

- Advertisement -

Related news

error: Content is protected !!