- Advertisement -
- Advertisement -

ವಿಟ್ಲ: ವಿಟ್ಲಮುಡ್ನೂರು ಗ್ರಾಮದ ಮಾಡತ್ತಡ್ಕ ಶಾಲೆಯ ನಿವೃತ್ತ ಅಧ್ಯಾಪಕ ಆಲಂಗಾರು ರಾಮಚಂದ್ರ ಭಟ್ (90) ಅವರು ಜುಲೈ 8ರಂದು ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.ನಾರ್ಶ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಾಪಕ ಶಿಕ್ಷಕರಾಗಿದ್ದ ಅವರು, ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ್ದರು. ಅಲ್ಲದೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ತಾಲೂಕು ಸಹಕಾರ್ಯವಾಹರಾಗಿಯೂ ಕಾರ್ಯನಿರ್ವಹಿಸಿದ್ದರು.
ಆಲಂಗಾರು ವೈದಿಕ ಮನೆತನದವರಾಗಿದ್ದ ಅವರು ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿತ್ವವಾಗಿ ಗುರುತಿಸಿಕೊಂಡಿದ್ದರು.ಮೃತರು ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.ಅವರ ನಿಧನಕ್ಕೆ ಶಿಕ್ಷಣ ಕ್ಷೇತ್ರದ ಗಣ್ಯರು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
- Advertisement -








