Tuesday, April 30, 2024
spot_imgspot_img
spot_imgspot_img

ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಪ್ರಕರಣ- 3 ಮಂದಿ ವಶಕ್ಕೆ ಪಡೆದು ವಿಚಾರಣೆ

- Advertisement -G L Acharya panikkar
- Advertisement -

ಬೆಳ್ತಂಗಡಿ: ಉಜಿರೆ‌ಯಲ್ಲಿ ನಿನ್ನೆ ಗ್ರಾಮ ಪಂಚಾಯತ್ ಚುನಾವಣೆಯ‌ ಮತ‌ಎಣಿಕೆ ಸಂದರ್ಭದಲ್ಲಿ ಪಾಕಿಸ್ಥಾನ ಪರ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು 3 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ‌‌ ಎಂದು ತಿಳಿದುಬಂದಿದೆ.

ಗುರುವಾಯನಕೆರೆ‌‌ ಸಮೀಪದ ಪಿಲಿಚಂಡಿಕಲ್ಲು ಕುವೆಟ್ಟು ನಿವಾಸಿಗಳಾದ ಮೊಹಮ್ಮದ್ ಹರ್ಷದ್( 22 ), ದಾವೂದ್ ( 36) ಹಾಗೂ ಇಸಾಕ್ (28) ಎಂಬವರನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನೂ ಕೂಡ ಕೆಲವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಎಸ್ಪಿ ಬಿ.ಎಂ. ಲಕ್ಷ್ಮೀ ಪ್ರಸಾದ್ ಸೂಚನೆ ಮೇರೆಗೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಹಾಗೂ ಉಪನಿರೀಕ್ಷಕ ನಂದಕುಮಾರ್ ತಂಡ ಈ ಪ್ರಕರಣ ಸಂಬಂಧ ತನಿಖೆ ಕೈಗೆತ್ತಿಕೊಂಡಿದೆ. ಒಂದು‌ ವೇಳೆ ಪ್ರಕರಣ ಸಾಬೀತಾದರೆ ಉದ್ದೇಶಪೂರ್ವಕವಾಗಿ ದೇಶ ದ್ರೋಹ 124(A) ಕಾಯ್ದೆಯಡಿ ಪ್ರಕರಣ ದಾಖಲಾಗಲಿದ್ದು, ಘೋಷಣೆ ಕೂಗಿದ ಕಿಡಿಗೇಡಿಗಳು ಬಂಧನದ ಭೀತಿಯಲ್ಲಿದ್ದಾರೆ.

- Advertisement -

Related news

error: Content is protected !!