- Advertisement -
- Advertisement -




ಉಡುಪಿ: ಕೇರಳ ಸಿಎಂ ವಿ.ಡಿ. ಸತೀಶನ್ ಅವರು ಇಂದು(ಜು.11) ಮುಂಜಾನೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.
Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದು, ಮುಂಜಾನೆಯೇ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಅವರಿಗೆ ಗೌರವ ಸಲ್ಲಿಸಲಾಯಿತು.
ದೇವಿ ದರ್ಶನದ ಬಳಿಕ ಅಭಿಮಾನಿಗಳ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಮೂಲಕ ಸಿಎಂ ಸತೀಶನ್ ಅವರು ಸರಳತೆ ಪ್ರದರ್ಶಿಸಿದರು ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -







