- Advertisement -
- Advertisement -

ಸುಳ್ಯ: ಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪರಿಚಿತ ವ್ಯಕ್ತಿಯ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ದೂರಿನ ಪ್ರಕಾರ, ಬಾಲಕಿ ಶಾಲೆಗೆ ನಿರಂತರವಾಗಿ ಗೈರುಹಾಜರಾಗುತ್ತಿದ್ದ ಹಿನ್ನೆಲೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಬಾಲಕಿಯ ನೆರೆಮನೆಯ ನಿವಾಸಿ ಹಾಗೂ ಪರಿಚಿತನಾಗಿದ್ದ ಮಂಜುನಾಥ ಎಂಬಾತನು 2026ರ ಜೂನ್ 22ರಿಂದ ಜುಲೈ 9ರವರೆಗೆ ವಿವಿಧ ಸಂದರ್ಭಗಳಲ್ಲಿ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಮುಖ್ಯೋಪಾಧ್ಯಾಯರ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 94/2026 ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಕಲಂ 64(2)(m), 65(1) ಹಾಗೂ ಪೊಕ್ಸೊ ಕಾಯ್ದೆಯ ಕಲಂ 4, 5(l), 6ರಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Advertisement -








