Sunday, July 12, 2026
spot_imgspot_img
spot_imgspot_img

ಹಿಂದೂ ಹೋರಾಟಗಾರ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷಾದ್ ಹಾಗೂ ಮತ್ತೊರ್ವ ಆರೋಪಿಯ ಬಂಧನ…!

- Advertisement -
- Advertisement -

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ಮುಂದಾಳು ಪ್ರವೀಣ್ ನೆಟ್ಟಾ‌ರ್ ಅವರನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ.

ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿಯಾಗಿದ್ದ ನೌಶಾದ್‌ನನ್ನು(32) ಬೆಂಗಳೂರಿನಲ್ಲಿ ಬಂಧಿಸಿದ್ದರೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರಸ್ತೆ ನಿವಾಸಿ ಅಬ್ದುಲ್ ನಾಸಿರ್‌ನನ್ನು (41) ಕೇರಳದ ಕೊಚ್ಚಿಯಲ್ಲಿ ವಶಕ್ಕೆ ಪಡೆಯಲಾಗಿದೆ.

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಎನ್‌ಐಎ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿ ಒಬ್ಬೊಬ್ಬರನ್ನೇ ಜೈಲಿಗಟ್ಟಿದ್ದರು. ಇವರ ಪತ್ತೆಗಾಗಿ ನಿಖರ ಮಾಹಿತಿ ನೀಡಿದವರಿಗೆ ತಲಾ 2 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿತ್ತು.

ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಎನ್‌.ಐ.ಎ. ವಿಶೇಷ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿದೆ.

- Advertisement -

Related news

error: Content is protected !!