Wednesday, July 15, 2026
spot_imgspot_img
spot_imgspot_img

ವಿಟ್ಲ: ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಗೆ ಎಂ.ಆರ್.ಪಿ.ಎಲ್ ವತಿಯಿಂದ 4 ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ಘಾಟನೆ

- Advertisement -
- Advertisement -

ವಿಟ್ಲ: ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (RMSA)ವಿಟ್ಲ ಇಲ್ಲಿಗೆ ಮಂಗಳೂರು ಎಂ.ಆರ್.ಪಿ.ಎಲ್ ವತಿಯಿಂದ 3.5 ಲಕ್ಷ ರೂಪಾಯಿಯಲ್ಲಿ ನೀಡಲಾದ 4 ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ಘಾಟನಾ ಸಮಾರಂಭ ನಡೆಯಿತು.

ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ಘಾಟನೆಯನ್ನು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ಗೌಡ ನಾಯ್ತೊಟ್ಟು ನೆರವೇರಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೌನ್ಸಿಲರ್ ರವಿಪ್ರಕಾಶ್ ವಿಟ್ಲ, ಹಿರಿಯ ವಿದ್ಯಾರ್ಥಿ ಹಾಗೂ ದಾನಿಗಳಾದ ಸುಬ್ರಾಯ ಪೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮಾನಾಥ್ ವಿಟ್ಲ, ಪ್ರಾಂಶುಪಾಲರಾದ ಸುಧೀರ್ ಕುಮಾರ್, ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರವಿಶಂಕರ್ ಸಿ ,ಹಾಗೂ ಸದಸ್ಯರು, ಮುಖ್ಯ ಶಿಕ್ಷಕಿ ವಾರಿಜ ಬಿ.ಎ, ಸಹಶಿಕ್ಷಕರು ಉಪಸ್ಥಿತರಿದ್ದರು.

- Advertisement -

Related news

error: Content is protected !!