Tuesday, July 14, 2026
spot_imgspot_img
spot_imgspot_img

ಆ.15ರೊಳಗೆ 5927 ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು: ಸಚಿವ ಈಶ್ವರ್‌ ಖಂಡ್ರೆ

- Advertisement -
- Advertisement -

ಬೆಂಗಳೂರು : ಆಗಸ್ಟ್ 15ರ ಸ್ವಾತಂತ್ರ್ಯದಿನದೊಳಗೆ ರಾಜ್ಯದ ಎಲ್ಲ 5927 ಗ್ರಾಮ ಪಂಚಾಯ್ತಿಗಳಿಗೆ ʼಮಹಾತ್ಮಾ ಗಾಂಧಿ ಪಂಚಾಯತಿʼ ಎಂದು ನಾಮಕರಣ ಮಾಡಲು ಗಡುವು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್‌ ಬಿ ಖಂಡ್ರೆ ತಿಳಿಸಿದ್ದಾರೆ.

ಇಲಾಖೆಯ ಆಯುಕ್ತಾಲಯದಲ್ಲಿಂದು ಪಿಡಿಓ, ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆ ಕೌನ್ಸಲಿಂಗ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೆಸರನ್ನು ಚಿರಸ್ಥಾಯಿಗೊಳಿಸಲು 2026-27ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 279ರಲ್ಲಿ ಘೋಷಣೆ ಮಾಡಿರುವಂತೆ ಎಲ್ಲ ಪಂಚಾಯ್ತಿಗಳ ಹೆಸರು ಬದಲಾವಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.ಗ್ರಾಮ ಸ್ವರಾಜ್ಯದ ಪ್ರತಿಪಾದಕರಾಗಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಗೌರವಾರ್ಥ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ -ಮನ್ರೇಗಾ ಎಂದು ಹೆಸರಿಡಲಾಗಿತ್ತು. ಆದರೆ, ಕೇಂದ್ರ ಸರಕಾರ ಜುಲೈ 1ರಿಂದ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಯಲ್ಲಿ ಮಹಾತ್ಮಾ ಗಾಂಧಿ ಹೆಸರನ್ನೇ ತೆಗೆದು ಹಾಕಿದೆ.

ಹೀಗಾಗಿ ರಾಜ್ಯ ಸರಕಾರ ಎಲ್ಲ ಪಂಚಾಯತಿಗಳಿಗೆ ಗಾಂಧಿ ಹೆಸರಿಡಲು ತೀರ್ಮಾನಿಸಿದೆ ಎಂದರು.ತಾವು ಕಳೆದ ತಿಂಗಳು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲ ರಾಜ್ಯಗಳ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಸಮಾವೇಶದಲ್ಲಿ ದೇಶದಲ್ಲಿರುವ ಎಲ್ಲ 2.68 ಕೋಟಿ ಗ್ರಾಮ ಪಂಚಾಯತಿಗಳಿಗೂ ಮಹಾತ್ಮಾ ಗಾಂಧಿ ಹೆಸರಿಡುವಂತೆ ಆಗ್ರಹಿಸಿದ್ದಾಗಿ ತಿಳಿಸಿದರು.

ಅದೇ ರೀತಿ ವಿಬಿ ಜಿ ರಾಮ್ ಜಿ ಹೆಸರಿನ ಮುಂದೆ ಮಹಾತ್ಮಾ ಗಾಂಧಿ ವಿಬಿಜಿ ರಾಮ್ ಜಿ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿದ್ದಾಗಿಯೂ ಈಶ್ವರ್‌ ಖಂಡ್ರೆ ತಿಳಿಸಿದರು.

- Advertisement -

Related news

error: Content is protected !!