Wednesday, July 15, 2026
spot_imgspot_img
spot_imgspot_img

ಕೇರಳ: ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಮಗು ದಾರುಣ ಸಾವು

- Advertisement -
- Advertisement -

ಮಲಪ್ಪುರಂ : ಮಿಕ್ಸ್ಚರ್ ತಿನ್ನುತ್ತಿದ್ದ ವೇಳೆ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ವೆಂಗರಾ ಪ್ರದೇಶದ ಕುನ್ನುಂಪುರಂನಲ್ಲಿ ಸೋಮವಾರ ನಡೆದಿದೆ.

ಬಾಲಕ ಮನೆಯಲ್ಲಿ ಮಿಕ್ಸ್‌ಚರ್ ತಿನ್ನುತ್ತಿದ್ದ ವೇಳೆ ಅದರಲ್ಲಿದ್ದ ಕಡಲೆಕಾಯಿ ಆಕಸ್ಮಿಕವಾಗಿ ಗಂಟಲಲ್ಲಿ ಸಿಲುಕಿದ್ದರ ಪರಿಣಾಮ ಬಾಲಕನಿಗೆ ಉಸಿರಾಡಲು ಕಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಕ್ಷಣವೇ ಕುಟುಂಬದವರು ಬಾಲಕನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.

ಘಟನೆಗೆ ಸಂಬಂಧ ಪೊಲೀಸರು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!