- Advertisement -
- Advertisement -
ಕೋಝಿಕೋಡ್: ಮನೆಯ ಲಾಕರ್ ನಲ್ಲಿ ಅಡಗಿಸಿಟ್ಟು ಸಾಗಿಸಲು ಯತ್ನಿಸುತ್ತಿದ್ದ 2. 6 ಕಿಲೋ ಅಕ್ರಮ ಚಿನ್ನವನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಶಪಡಿಸಲಾಗಿದೆ.
ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮನೆಯ ಲಾಕರ್ ನ ಒಳಗಡೆ ಈ ಚಿನ್ನವನ್ನು ಬಚ್ಚಿಡಲಾಗಿತ್ತು.
ಖಚಿತ ಮಾಹಿತಿ ಮೇರೆಗ ಈ ಕಾರ್ಯಾಚರಣೆ ನಡೆಸಲಾಗಿದೆ. ವಶಪಡಿಸಿಕೊಳ್ಳಲಾದ ಚಿನ್ನದ ಮೌಲ್ಯ ಒಂದು ಕೋಟಿ ರೂಪಾಯಿಗೂ ಹೆಚ್ಚಾಗಿದೆ.
ಕೇರಳದ ವಿಮಾನ ನಿಲ್ದಾಣಗಳಲ್ಲಿ ಪ್ರತಿದಿನ ಸರಾಸರಿ ಎರಡು ಅಕ್ರಮ ಚಿನ್ನ ಸಾಗಾಟ ಪ್ರಕರಣವನ್ನು ಅಧಿಕಾರಿಗಳು ಭೇದಿಸುತ್ತಿದ್ದಾರೆ.
- Advertisement -