- Advertisement -
- Advertisement -
ಬಂಟ್ವಾಳ, ಜು.16: ಬಿಸಿ ರೋಡ್ನ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದ ಬಳಿ ಬಸ್ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಗಂಭೀರ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗುರುವಾರ ಸಂಜೆ ನಡೆದಿದೆ.

ಸಂಜೆ ಸುಮಾರು 6 ಗಂಟೆಯ ವೇಳೆಗೆ ನಡೆದ ಈ ಘಟನೆಯಲ್ಲಿ ಸುಮಾರು 21 ರಿಂದ 25 ವರ್ಷದೊಳಗಿನ ಯುವತಿಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣವೇ ಆಕೆಯನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಆರೋಪಿಯನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದ್ದು, ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
- Advertisement -








