Sunday, July 19, 2026
spot_imgspot_img
spot_imgspot_img

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಯುವಕ ಹೃದಯಾಘಾತದಿಂದ ಸಾವು

- Advertisement -
- Advertisement -

ಶಿವಮೊಗ್ಗ: ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆ ಸಮೀಪದ ಕಟ್ಟಿನಹೊಳೆ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಶ್ರೀಕಾಂತ್ (28) ಮೃತ ದುರ್ದೈವಿ. ಆತ ಮೂವರು ಸ್ನೇಹಿತರೊಂದಿಗೆ ಕೊಡಚಾದ್ರಿ ಪ್ರವಾಸಕ್ಕೆ ಶುಕ್ರವಾರ ತೆರಳಿ, ಕಟ್ಟಿನಹೊಳೆ ಗ್ರಾಮದ ಸ್ನೇಹಿತನ ಮನೆಯಲ್ಲಿ ತಂಗಿದ್ದರು. ಶನಿವಾರ ಗೆಳೆಯರೆಲ್ಲರೂ ಕೂಡಿ ಬೆಳಗ್ಗೆ ಕೊಡಚಾದ್ರಿ ಶಿಖರಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದರು.

ರಾತ್ರಿ ಏಕಾಏಕಿ ಶ್ರೀಕಾಂತ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ನೇಹಿತರು ಆತನನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮೊದಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!