Tuesday, July 21, 2026
spot_imgspot_img
spot_imgspot_img

ಬಾಗಲಕೋಟೆ: ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಕೆ.ಎಸ್.ಆರ್‍.ಟಿ.ಸಿ ಬಸ್; 6 ಪ್ರಯಾಣಿಕರಿಗೆ ಗಾಯ

- Advertisement -
- Advertisement -

ಬಾಗಲಕೋಟೆ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆ.ಎಸ್.ಆರ್‍.ಟಿ.ಸಿ ಬಸ್‌ ರಸ್ತೆ ಬದಿಯ ಜಮೀನಿಗೆ ನುಗ್ಗಿದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವಿನಕಪ್ಪ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ-218ರಲ್ಲಿ ನಡೆದಿದೆ.

ಬಾಗಲಕೋಟೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಬಸ್‌ನ ಎಕ್ಸೆಲ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್‌ ಹೆದ್ದಾರಿ ಪಕ್ಕದ ಜಮೀನಿಗೆ ನುಗ್ಗಿದೆ ಎನ್ನಲಾಗಿದೆ.

ಬಸ್‌ನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಬಸ್ ಏಕಾಏಕಿ ಜಮೀನಿಗೆ ನುಗ್ಗಿ ಎತ್ತರಕ್ಕೆ ಜಿಗಿದ ಪರಿಣಾಮ ಐದಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆಯು ಕುಳಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

Related news

error: Content is protected !!