Tuesday, July 21, 2026
spot_imgspot_img
spot_imgspot_img

ಸುರತ್ಕಲ್: ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಕೊಲೆಗೈದ ಅಣ್ಣ

- Advertisement -
- Advertisement -

ಸುರತ್ಕಲ್: ರಾತ್ರಿ ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಕೊಲೆಗೈದಿರುವ ಘಟನೆ ಚೊಕ್ಕಬೆಟ್ಟು ಮಠದ ಬಳಿ ರವಿವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.

ಕೊಲೆಯಾದ ವ್ಯಕ್ತಿಯನ್ನು ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿ ಹಾಗೂ ಸದ್ಯ ಚೊಕ್ಕಬೆಟ್ಟು ಮಠದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ.

ಈತನ ಅಣ್ಣ ಸೋಮನಾಥ್ (21) ಕೊಲೆಗೈದ ಆರೋಪಿ ಎನ್ನಲಾಗಿದ್ದು ಆತನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಲಗಿದ್ದಲ್ಲೇ ತಲೆಗೆ ಕಲ್ಲು ಎತ್ತಿಹಾಕಿದ ಸ್ಥಿತಿಯಲ್ಲಿ ಮಲ್ಲಿಕಾರ್ಜುನನ ಮೃತದೇಹ ಪತ್ತೆಯಾಗಿದೆ.

ತಾಯಿಯೊಂದಿಗೆ ಇಬ್ಬರು ಸಹೋದರರು ವಾಸವಾಗಿದ್ದರು. ತಾಯಿ ಇತ್ತೀಚೆಗೆ ಕೊಪ್ಪಳಕ್ಕೆ ಹೋಗಿದ್ದರು. ಘಟನೆ ನಡೆದ ರಾತ್ರಿ ಸಹೋದರರಿಬ್ಬರು ಮನೆಯಲ್ಲಿ ಮಲಗಿದ್ದರು ಎನ್ನಲಾಗಿದೆ. ಆದರೆ ಬೆಳಗ್ಗೆ ನಿದ್ದೆಯಿಂದ ಎದ್ದ ಸೋಮನಾಥ್, “ನನ್ನ ತಮ್ಮಮಲಗಿದ್ದಲ್ಲಿಂದ ಏಳುತ್ತಿಲ್ಲ” ಎಂದು ನೆರೆಮನೆಯವರಿಗೆ ತಿಳಿಸಿದ್ದಾನೆ. ನೆರೆಮನೆಯವರು ಮನೆಯ ಮಾಲಕಿ ರೇಖಾ ಅವರಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ತಿಳಿಸಿದ್ದಾರೆ.

ಮಾಹಿತಿ ಪಡೆದ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್ ಎಚ್.ಎಂ., ಪಣಂಬೂರು ಉಪ ವಿಭಾಗದ ಎಸಿಪಿ ಶ್ರೀಕಾಂತ್, ಸುರತ್ಕಲ್ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ವಿಧಿವಿಜ್ಞಾನ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

- Advertisement -

Related news

error: Content is protected !!