Tuesday, July 21, 2026
spot_imgspot_img
spot_imgspot_img

ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ, ಅಮಿತ್ ಶಾ–ಧರ್ಮೇಂದ್ರ ಪ್ರಧಾನ್ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ

- Advertisement -
- Advertisement -

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನದ ಸಮಯದಲ್ಲಿ ಭಾರೀ ಭದ್ರತೆಯ ನಡುವೆಯೂ ಕಾಕ್ರೋಚ್ ಜನತಾ ಪಾರ್ಟಿ ‘ಸಂಸದ್ ಚಲೋ’ ಪ್ರತಿಭಟನೆ ಬಿಸಿ ಏರುತ್ತಿದೆ. ಪ್ರತಿಭಟನೆ ತೀವ್ರಗೊಂಡ ನಂತರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ದೆಹಲಿಯಲ್ಲಿ ಪ್ರತಿಭಟನೆ ಜೋರಾಗುತ್ತಿದ್ದಂತೆ ಅಭಜಿತ್ ದೀಪ್ಕೆಯನ್ನು ಅರೆಸ್ಟ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಈ ನಡುವೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಗೃಹ ಸಚಿವ ಅಮಿತ ಶಾ ಭೇಟಿ ಭಾರೀ ಕುತೂಹಲ ಮೂಡಿಸಿದೆ.

ಪೊಲೀಸ್ ಲಾಠಿ ಚಾರ್ಜ್ ನಂತರ ರಾಷ್ಟ್ರ ರಾಜಧಾನಿಯಲ್ಲಿ ಉದ್ವಿಗ್ನತೆ ಹೆಚ್ಚಾಗಿತ್ತು. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಿ ಸಂಸತ್ತಿನ ಕಡೆಗೆ ಹೋಗೋಕೆ ಪ್ರಯತ್ನಿಸಿದರು ಎಂದು ಆರೋಪಿಸಿದ ನಂತರ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದು, ಲಾಠಿ ಚಾರ್ಜ್ ಮಾಡಿದ್ದಾರೆ. ಹಲವಾರು ಪ್ರತಿಭಟನಾಕಾರರನ್ನು ಬಂಧಿಸಲಾಯಿತು. ಜಂತರ್ ಮಂತರ್‌ನಲ್ಲಿ ಸಾವಿರಾರು ಬೆಂಬಲಿಗರು ಜಮಾಯಿಸಿದ್ದರು. ಅಲ್ಲಿ ವಿರೋಧ ಪಕ್ಷದ ನಾಯಕರು ಕೂಡಾ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಸಂಸತ್ತಿನ ಬಳಿ ಪ್ರತಿಭಟನಾಕಾರರಿಂದ ಯಾವುದೇ ರೀತಿಯ ಭದ್ರತಾ ಉಲ್ಲಂಘನೆಯನ್ನು ತಡೆಗಟ್ಟಲು ಕ್ಷಿಪ್ರ ಕಾರ್ಯ ಪಡೆ ಸಿಬ್ಬಂದಿ ಸೇರಿದಂತೆ ಭದ್ರತಾ ಪಡೆಗಳನ್ನು ಕೇಂದ್ರ ದೆಹಲಿಯಾದ್ಯಂತ ನಿಯೋಜಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವಾರು ಮೆಟ್ರೋ ನಿಲ್ದಾಣದ ಗೇಟ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಯಿತು, ಇದು ಪ್ರಯಾಣಿಕರ ಮೇಲೆ ಪರಿಣಾಮ ಬೀರಿತು.

ಪ್ರತಿಭಟನೆಯಲ್ಲಿ ನಿರತರಾಗಿದ್ದ ದೀಪ್ಕೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಿಜೆಪಿ ಸಂಸ್ಥಾಪಕ ದೀಪ್ಕೆ ಬಂಧನ ಸಂಸತ್ತಿನ ಬಳಿ ಪಕ್ಷದ ‘ಸಂಸದ್ ಚಲೋ’ ಮೆರವಣಿಗೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸೋಮವಾರ ದೆಹಲಿ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಬಂಧಿಸಿದ್ದಾರೆ ಎಂದು ವಕ್ತಾರ ಸೌರವ್ ದಾಸ್ ತಿಳಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿದ ಅಮಿತ್ ಶಾ ಪರೀಕ್ಷಾ ಅಕ್ರಮಗಳ ಆರೋಪದ ಮೇಲೆ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಮೆರವಣಿಗೆಯ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾದರು ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!