Tuesday, July 21, 2026
spot_imgspot_img
spot_imgspot_img

ವಿವಾಹಿತೆ ಸಾವಿನ ಪ್ರಕರಣ: ಪತಿ ಮನೆಯ ಮೂವರ ವಿರುದ್ಧ ಕೊಲೆ ಆರೋಪದಡಿ ಪ್ರಕರಣ ದಾಖಲು

- Advertisement -
- Advertisement -

ಸುಳ್ಯ: ವಿವಾಹಿತೆಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾವ, ಅತ್ತೆ ಹಾಗೂ ನಾದಿನಿ ವಿರುದ್ಧ ಕೊಲೆ ಆರೋಪದಡಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುತ್ತೂರು ಕೆದಂಬಾಡಿ ನಿವಾಸಿ ಜುಬೈದ್ (43) ಅವರ ಪುತ್ರಿ ಫಾತಿಮತ್ ನಿಶಾನ್ ಅವರನ್ನು ನಾಲ್ಕು ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು.

ಜು.18ರಂದು ರಾತ್ರಿ ಫಾತಿಮತ್ ನಿಶಾನ್ ಅವರು ತಾಯಿಗೆ ಕರೆ ಮಾಡಿ, ತನ್ನ ಮಾವ ಅಲವಿ, ಅತ್ತೆ ಆಯಿಷ ಹಾಗೂ ನಾದಿನಿ ಫಸೀಲಾ ಅವರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿರುವುದಾಗಿ ತಿಳಿಸಿದ್ದರು.ಈ ವೇಳೆ ಫೋನ್ ಕಸಿದುಕೊಂಡ ಮಾವ ಅಲವಿ ಅವರು “ನಿಮ್ಮ ಮಗಳನ್ನು ಕೊಲ್ಲುತ್ತೇನೆ” ಎಂದು ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಬಳಿಕ ಪೋಷಕರು ಮಗಳ ಮನೆಗೆ ತೆರಳುವಷ್ಟರಲ್ಲಿ ಫಾತಿಮತ್ ನಿಶಾನ್ ಮೃತಪಟ್ಟಿರುವುದು ಕಂಡುಬಂದಿದೆ.

ತಮ್ಮ ಮಗಳನ್ನು ಕೌಟುಂಬಿಕ ಮನಸ್ತಾಪದ ಹಿನ್ನೆಲೆಯಲ್ಲಿ ಮಾವ ಅಲವಿ, ಅತ್ತೆ ಆಯಿಷ ಹಾಗೂ ನಾದಿನಿ ಫಸೀಲಾ ಸೇರಿ ಕೊಲೆ ಮಾಡಿರುವುದಾಗಿ ಜುಬೈದ್ ಅವರು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 100/2026ರಡಿ ಬಿಎನ್‌ಎಸ್ 2023ರ ಕಲಂ 85, 103(1) ಹಾಗೂ 3(5) ಅನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!