Tuesday, July 21, 2026
spot_imgspot_img
spot_imgspot_img

ರಾಯಚೂರು: ಮನೆಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ – ಗಂಭೀರ ಗಾಯ

- Advertisement -
- Advertisement -

ರಾಯಚೂರು: ಮನೆಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ.

4 ವರ್ಷದ ಬಾಲಕ ವೇಣುಗೋಪಾಲ್ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ದಾಳಿ ವೇಳೆ ನಾಯಿಗಳು ಬಾಲಕನ ತಲೆಯ ಭಾಗವನ್ನ ಸಂಪೂರ್ಣವಾಗಿ ಕಚ್ಚಿದೆ. ಈ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸದ್ಯ ಬಾಲಕನನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೀದಿ ನಾಯಿಗಳ ಹಾವಳಿಗೆ ಗ್ರಾಮದ ಪೋಷಕರು ಹೆದರಿದ್ದಾರೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!