Tuesday, July 21, 2026
spot_imgspot_img
spot_imgspot_img

ಬೆಂಗಳೂರು: ವಾಟ್ಸಪ್‌ಗೆ ಬಂತು ಮದುವೆ ಆಹ್ವಾನ – ಲಿಂಕ್‌ ಓಪನ್‌ ಮಾಡಿದ ಕೂಡಲೇ 9 ಲಕ್ಷ ಮಾಯ

- Advertisement -
- Advertisement -

ಬೆಂಗಳೂರು: ಮದುವೆ ಆಹ್ವಾನ ಪತ್ರಿಕೆ ಬಂದಿದೆ ಎಂದು ನಂಬಿ ಫೈಲ್ ಓಪನ್ ಮಾಡಿದ ಸರ್ಕಾರಿ ಅಧಿಕಾರಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಸುಮಾರು 9.96 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಸೈಬರ್ ವಂಚಕರು ಜನರನ್ನು ಮೋಸಗೊಳಿಸಲು ದಿನದಿಂದ ದಿನಕ್ಕೆ ಹೊಸ ಹೊಸ ತಂತ್ರಗಳನ್ನು ಬಳಸುತ್ತಿದ್ದಾರೆ. ವಾಟ್ಸಪ್‌ಗೆ ಬರುವ ಅಪರಿಚಿತ ಲಿಂಕ್‌ ಅಥವಾ ಫೈಲ್‌ಗಳನ್ನು ಕ್ಲಿಕ್‌ ಮಾಡಿ ಹಣ ಕಳೆದುಕೊಂಡ ಘಟನೆಗಳು ಆಗಾಗ ಕೇಳಿಬರುತ್ತಲೇ ಇವೆ. ಇದೀಗ ಅದೇ ರೀತಿಯಲ್ಲಿ ವಾಟ್ಸಪ್‌ನಲ್ಲಿ ಮದುವೆ ಆಹ್ವಾನದ ಹೆಸರಿನಲ್ಲಿ APK ಫೈಲ್ ಕಳುಹಿಸಿ ಸರ್ಕಾರಿ ಅಧಿಕಾರಿಯೊಬ್ಬರಿಗೆ ಸುಮಾರು 9.96 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ರಮೇಶ್ ಬಾಬು ಅವರಿಗೆ ಜುಲೈ 14ರಂದು ಸಂಜೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ವಾಟ್ಸಪ್‌ನಲ್ಲಿ ಮದುವೆ ಆಹ್ವಾನದ ಸಂದೇಶ ಬಂದಿದೆ. ಸ್ನೇಹಿತ ಅಥವಾ ಪರಿಚಿತರದ್ದಿರಬಹುದು ಎಂದು ಭಾವಿಸಿ ಅವರು ಆ ಫೈಲ್ ಅನ್ನು ಮಾಡಿದ್ದಾರೆ.

ಫೈಲ್ ಓಪನ್ ಮಾಡಿದ ಬಳಿಕ ಅದು APK ಫೈಲ್ ಎಂಬುದು ಗೊತ್ತಾಗಿದೆ. ಆಗ ಅದನ್ನು ಹೆಚ್ಚಿನ ಗಮನ ಕೊಡದೆ ಬಿಟ್ಟಿದ್ದಾರೆ. ಆದರೆ 15 ನಿಮಿಷಗಳಲ್ಲಿ ಅವರ ಮೊಬೈಲ್‌ಗೆ ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗುತ್ತಿರುವ ಸಂದೇಶಗಳು ಬರಲು ಆರಂಭಿಸಿವೆ.

ತಕ್ಷಣ ಬ್ಯಾಂಕ್ ಖಾತೆ ಪರಿಶೀಲಿಸಿದಾಗ, ಸುಮಾರು 9 ಲಕ್ಷ 96 ಸಾವಿರ ಹಣ ವಿವಿಧ ಹಂತಗಳಲ್ಲಿ ವಂಚಕರ ಖಾತೆಗೆ ವರ್ಗಾವಣೆಯಾಗಿರುವುದು ಗೊತ್ತಾಗಿದೆ. ಇದರಿಂದ ಬೆಚ್ಚಿಬಿದ್ದ ರಮೇಶ್ ಬಾಬು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪರಿಚಿತ ಸಂಖ್ಯೆಯಿಂದ ಬರುವ APK ಫೈಲ್‌ಗಳು, ಲಿಂಕ್‌ಗಳು ಅಥವಾ ಮದುವೆ ಆಹ್ವಾನದಂತಹ ಸಂದೇಶಗಳನ್ನು ಯಾವುದೇ ಕಾರಣಕ್ಕೂ ಓಪನ್ ಮಾಡಬಾರದು ಎಂದು ಸೈಬರ್ ತಜ್ಞರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

- Advertisement -

Related news

error: Content is protected !!