Wednesday, July 22, 2026
spot_imgspot_img
spot_imgspot_img

ಚೆನ್ನೈ: ನೀಟ್ ಪರೀಕ್ಷೆ ರದ್ದುಪಡಿಸುವಂತೆ ಟಿವಿಕೆ ಆಗ್ರಹ

- Advertisement -
- Advertisement -

ಚೆನ್ನೈ: ನೀಟ್ ಪರೀಕ್ಷೆ ಸುತ್ತ ವಿವಾದ ತೀವ್ರವಾಗಿರುವ ನಡುವೆಯೇ ತಮಿಳುನಾಡಿನ ಸಿಎಂ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ, ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ಆಗ್ರಹಿಸಿದೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ದೇಶದಾದ್ಯಂತ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಟಿವಿಕೆ ಪಕ್ಷ ತನ್ನ ನಿಲುವು ಸ್ಪಷ್ಟಪಡಿಸಿದೆ. ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಒತ್ತಾಯಿಸಿದೆ.

ಮಂಗಳವಾರ ಪ್ರಕಟಿಸಿದ ಹೇಳಿಕೆಯಲ್ಲಿ, ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಬೇಕು ಎಂದು ಟಿವಿಕೆ ಆಗ್ರಹಿಸಿದೆ. ಶಿಕ್ಷಣವನ್ನು ಕೇಂದ್ರದ ಸಮವರ್ತಿ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸಬೇಕು. ಸಾಧ್ಯವಾಗದಿದ್ದರೆ, ಮಧ್ಯಂತರ ಕ್ರಮವಾಗಿ ವಿಶೇಷ ವ್ಯವಸ್ಥೆ ರೂಪಿಸಿ ರಾಜ್ಯಗಳಿಗೆ ವೈದ್ಯಕೀಯ ಶಿಕ್ಷಣ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಅಧಿಕಾರ ನೀಡಬೇಕು ಎಂದು ಟಿವಿಕೆ ಸಲಹೆ ನೀಡಿದೆ.

ಪಕ್ಷವು ಡಿಎಂಕೆ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ, ನೀಟ್ ರದ್ದು ಮಾಡುತ್ತೇವೆ ಎಂದು ಹೇಳಿ ಜನರ ಮತ ಪಡೆಯುವ ರಾಜಕೀಯವನ್ನು ನಾವು ಮಾಡುವುದಿಲ್ಲ ಎಂದು ಟೀಕಿಸಿದೆ.

- Advertisement -

Related news

error: Content is protected !!