Thursday, July 23, 2026
spot_imgspot_img
spot_imgspot_img

ಬಿಜೆಪಿ ಮುತ್ತಿಗೆ ಯತ್ನದ ವೇಳೆ ಉದ್ವಿಗ್ನತೆ; ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ

- Advertisement -
- Advertisement -

ಬೆಂಗಳೂರು : ಬೆಂಗಳೂರಿನ ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ರಾಜ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಪ್ರತಿಭಟನೆ ವೇಳೆ ತೀವ್ರ ಹೈಡ್ರಾಮಾ ನಡೆದಿರುವುದು ವರದಿಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು, ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಈ ವೇಳೆ ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆದಿದ್ದಾರೆ.ದಿಲ್ಲಿ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ಬುಧವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಲಾಗಿತ್ತು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಬಿಜೆಪಿ ನಾಯಕರು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು.ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಭಾಗಿಯಾಗಿದ್ದರು. ಈ ವೇಳೆ ಕಿಡಿಗೇಡಿಗಳು ಅವರ ಮೇಲೆ ಮೊಟ್ಟೆ ಎಸೆದಿದ್ದಾರೆ. ಮೊಟ್ಟೆ ಎಸೆದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹರೀಶ್ ಅವರಿಗೆ ಮೊಟ್ಟೆಯಿಂದ ಹೊಡೆದಿದ್ದಾರೆ: ಆರ್.ಅಶೋಕ್

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್ ಅವರು, ರಾಹುಲ್ ಗಾಂಧಿಯವರು ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿದ್ದಾರೆ. ದೇಶದ ಯುವಜನತೆಗೆ ಮೋಸ ಮಾಡುತ್ತಿದ್ದಾರೆಂದು ಆಕ್ಷೇಪಿಸಿ ನಾವು ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ. ಆದರೆ, ಸರಕಾರ ನಮ್ಮೆಲ್ಲರನ್ನು ಬಂಧಿಸಿದ್ದು, ನಾವೆಲ್ಲರೂ ಪೊಲೀಸ್ ಕಸ್ಟಡಿಯಲ್ಲಿದ್ದೇವೆ ಎಂದು ವಿವರಿಸಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಚ್ಚು, ಲಾಂಗು, ಮೊಟ್ಟೆಗಳನ್ನು ಸಂಗ್ರಹಿಸಿ ಇಟ್ಟಿದ್ದರು. ಶಾಸಕರಾದ ರಾಮಮೂರ್ತಿ, ಅಶ್ವತ್ಥನಾರಾಯಣ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಹರೀಶ್ ಅವರಿಗೆ ಹಿಗ್ಗಾಮುಗ್ಗಾ ಮೊಟ್ಟೆಯಿಂದ ಹೊಡೆದಿದ್ದಾರೆ. ಅವಾಚ್ಯ ಶಬ್ದದಿಂದ ಬೈದಿದ್ದಾರೆ. ಇದೆಲ್ಲವನ್ನೂ ನೋಡಿದರೆ ಕರ್ನಾಟಕದಲ್ಲಿ ಗೂಂಡಾ ರಾಜ್ಯ ಇರುವುದು ಗೊತ್ತಾಗುತ್ತದೆ ಎಂದು ನುಡಿದರು.ಇವರೆಲ್ಲರೂ ಕೊತ್ವಾಲ್ ಶಿಷ್ಯಂದಿರು. ಡಿ.ಕೆ.ಶಿವಕುಮಾರ್, ಹರಿಪ್ರಸಾದ್ ಅವರು ಕೊತ್ವಾಲ್ ಶಿಷ್ಯರು. ಕರ್ನಾಟಕದಲ್ಲಿ ಕೊತ್ವಾಲ್ ರಾಮಚಂದ್ರನ ಆಡಳಿತ ಇದೆ. ರಾಜ್ಯದಲ್ಲಿ ವಿಪಕ್ಷಗಳಿಗೆ ರಕ್ಷಣೆ ಇದೆಯೇ?. ಕೊಲೆ ಮಾಡಲು ಬಂದಿದ್ದ ಗ್ಯಾಂಗ್ ಅದು. ಇದನ್ನು ಖಂಡಿಸಿ ಕಮೀಷನರ್‍ಗೆ ಮನವಿ ನೀಡುತ್ತೇವೆ. ಕೂಡಲೇ ಗೂಂಡಾ ಕಾಯ್ದೆಯಡಿ ಹಲ್ಲೆಕೋರರನ್ನು ಬಂಧಿಸಲು ಆಗ್ರಹಿಸುವುದಾಗಿ ತಿಳಿಸಿದರು.

- Advertisement -

Related news

error: Content is protected !!