- Advertisement -
- Advertisement -



ಬಂಟ್ವಾಳ: ಪರಂಗಿಪೇಟೆಯ ಕೆನರಾ ಬ್ಯಾಂಕ್ನಲ್ಲಿ ನಡೆದ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಪರಂಗಿಪೇಟೆಯಲ್ಲಿರುವ ಕೆನರಾ ಬ್ಯಾಂಕ್ನ ಮೇಲ್ಛಾವಣಿಯನ್ನು ಕೊರೆದು ಒಳಪ್ರವೇಶಿಸಿ ಹಣ ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ 2026ರ ಜುಲೈ 13ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ.106/2026ರಡಿ BNS-2023ರ ಕಲಂ 331(3), 331(4), 305(a) ಹಾಗೂ 62ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ತನಿಖೆಯ ವೇಳೆ ಪ್ರಕರಣದ ಆರೋಪಿಗಳ ಪೈಕಿ ಬಂಟ್ವಾಳದ ಮಾರಿಪಳ್ಳ ನಿವಾಸಿ ಮೊಹಮ್ಮದ್ ಶಾಖಿರ್ (33) ಎಂಬಾತನನ್ನು ಜುಲೈ 22ರಂದು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -








