- Advertisement -
- Advertisement -



ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿ ವಿಡಿಯೋ ಮಾಡಿದ್ದ ಯುವಕನನ್ನು ಬಾಣಾಸವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಹಡ್ಸನ್ ಎಂಬಾತನ ಮೇಲೆ ಎಫ್ ಐಆರ್ ದಾಖಲಾಗಿದೆ. ಈತ ಅವಾಚ್ಯ ಶಬ್ದ ಬಳಸಿ ಮೋದಿಯನ್ನು ನಿಂದಿಸಿ ವಿಡಿಯೋ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿತ್ತು.
ಈ ವಿಡಿಯೋ ವಿರುದ್ಧ ಸರ್ವಜ್ಞನಗರ ಬಿಜೆಪಿ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿತ್ತು. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿರುವ ಬಾಣಸವಾಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
- Advertisement -








