Friday, July 24, 2026
spot_imgspot_img
spot_imgspot_img

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ; ನ್ಯಾಯಾಂಗ ಬಂಧನಕ್ಕೆ ಆದೇಶ

- Advertisement -
- Advertisement -

ವಿಟ್ಲ: ವಿಟ್ಲ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಸುಮಾರು ಎಂಟು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯ ಅಕ್ರಮ ಸಂಖ್ಯೆ 45/2017, ಕಲಂ 379 ಹಾಗೂ 34 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿರುವ ಮಂಗಳೂರು ಕೊಲ್ಲೂರು ನಿವಾಸಿ ವಿಜಯ (32) ಎಂಬಾತ ಕಳೆದ ಸುಮಾರು ಎಂಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಆರೋಪಿಯನ್ನು ಜುಲೈ 23, 2026ರಂದು ವಿಟ್ಲ ಠಾಣೆಯ ಸಿಬ್ಬಂದಿಗಳಾದ ಪಿಸಿ ಶಿವಾನಂದ ಹಾಗೂ ಪಿಸಿ ಯಂಕಪ್ಪ ಮಂಗಳೂರಿನಲ್ಲಿ ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!