- Advertisement -
- Advertisement -


ಬಂಟ್ವಾಳ, ಜು.24: ಕಳವು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಿಹಾರದ ವೈಶಾಲಿ ನಿವಾಸಿ ಸಂಜಯ್ ಸಹಾನಿ (48) ಎಂಬಾತನನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಪತ್ತೆಹಚ್ಚಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಅ.ಕ್ರ.76/2016 (ಕಲಂ 379 ಐಪಿಸಿ) ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯಾಗಿದ್ದ ಸಂಜಯ್ ಸಹಾನಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಜುಲೈ 24, 2026ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ.
- Advertisement -








