
ಮಂಗಳೂರು: ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಇಂದು ಮಧ್ಯಾಹ್ನ ನಡೆದ ಮಾರಕಾಸ್ತ್ರ ದಾಳಿಯಲ್ಲಿ ರೌಡಿಶೀಟರ್ ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಪ್ರಾಥಮಿಕ ಮಾಹಿತಿಯಂತೆ ವಿಖ್ಯಾತ್ ಅಲಿಯಾಸ್ ವಿಕ್ಕಿ ಬಪ್ಪಾಲ್(32) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ ಸುಮಾರು 1:45 ಗಂಟೆ ವೇಳೆಗೆ ವಿಕ್ಕಿ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಮಚ್ಚಿನಿಂದ ದಾಳಿ ನಡೆಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದಾಳಿಯಲ್ಲಿ ವಿಕ್ಕಿ ಕುತ್ತಿಗೆಯ ಸಮೀಪ ಆಳವಾದ ಗಾಯವಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಕ್ಕಿ ಮೇಲೆ ಮಂಗಳೂರಿನ ವಿವಿಧ ಠಾಣೆಗಳಲ್ಲಿ ಪ್ರಕರಣಗಳಿದ್ದು ಗಾಂಜಾ ಪೆಡ್ಲರ್ ಎಂದು ಹೇಳಲಾಗಿದೆ.
ಘಟನೆ ಸಂಬಂಧ ಪೊಲೀಸರು ನಗರದಾದ್ಯಂತ ತಪಾಸಣೆ ತೀವುಗೊಳಿಸಿದ್ದು, ಎಲ್ಲಾ ಚೆಕ್‌ಪೋಸ್ಟ್ ಗಳಿಗೆ ಎಚ್ಚರಿಕೆ ನೀಡಲಾಗಿದೆ. ಆರೋಪಿಯ
ಪತ್ತೆಗಾಗಿ ವಿಶೇಷ ಶೋಧ ಕಾರ್ಯ ಮುಂದುವರಿದಿದೆ.ಈ ಸಂಬಂಧ ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಲಿದ್ದು, ಪೂರ್ವ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.








