Saturday, July 25, 2026
spot_imgspot_img
spot_imgspot_img

ವಿಟ್ಲ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಹಾಗೂ ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ಶಾಂತಿನಗರ, ವಿಟ್ಲ-ಬಂಟ್ವಾಳ, ಗೌಡ ಮಹಿಳಾ ಘಟಕ , ಗೌಡ ಯುವ ವೇದಿಕೆ ಇವರ ಆಶ್ರಯದಲ್ಲಿ “ಆಟಿಯಲ್ಲೊಂದು ದಿನ 2026”

- Advertisement -
- Advertisement -

ವಿಟ್ಲ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಹಾಗೂ ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ಶಾಂತಿನಗರ, ವಿಟ್ಲ-ಬಂಟ್ವಾಳ, ಗೌಡ ಮಹಿಳಾ ಘಟಕ , ಗೌಡ ಯುವ ವೇದಿಕೆ ಇವರ ಆಶ್ರಯದಲ್ಲಿ “ಆಟಿಯಲ್ಲೊಂದು ದಿನ 2026” ಕಾರ್ಯಕ್ರಮವು ಜುಲೈ 26(ನಾಳೆ) ಭಾನುವಾರ ವಿಟ್ಲದ ಅಕ್ಷಯ ಸಮುದಾಯ ಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 9.30ರಿಂದ 11.30ರವರೆಗೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅರೆಭಾಷೆ ಹಾಡು, ಸೋಬಾನೆ, ಕುಣಿತ ಹಾಗೂ ದಂಪತಿಗಳಿಗೆ ವಿಶೇಷ ಸ್ಪರ್ಧೆಗಳು ನಡೆಯಲಿವೆ.

ಬಳಿಕ ಬೆಳಿಗ್ಗೆ 11.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ (ರಿ.), ಮಂಗಳೂರು ನಿಕಟ ಪೂರ್ವ ಅಧ್ಯಕ್ಷೆ ಶ್ರೀಮತಿ ಸೌಮ್ಯ ಸುಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ವಿಶ್ರಾಂತ ಪ್ರಾಂಶುಪಾಲರು ಹಾಗೂ ಜೆಸಿ ರಾಷ್ಟ್ರೀಯ ತರಬೇತುದಾರರಾದ ಸೀತಾರಾಮ ಕೇವಳ ಉಪನ್ಯಾಸ ನೀಡಲಿದ್ದಾರೆ.

ಗೌಡರ ಯಾನೆ ಒಕ್ಕಲಿಗರ ಸಂಘ (ರಿ.), ವಿಟ್ಲ ಅಧ್ಯಕ್ಷರಾದ ಸಿ. ಕುಶಾಲಪ್ಪ ಗೌಡ ಕಣ್ಣೂರ್, ಗೌರವಾಧ್ಯಕ್ಷರಾದ ಶ್ರೀ ಗಿರಿಯಪ್ಪ ಗೌಡ ಶಾಂತಿಲ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಅಮಿತಾಕೃಷ್ಣ ಕುಡಿಪ್ಪಾಡಿಗುತ್ತು ಹಾಗೂ ಯುವ ವೇದಿಕೆ ಅಧ್ಯಕ್ಷ ಶ್ರೀ ದಿನೇಶ್ ಮಾಡೇಲ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಆಟಿ ತಿಂಗಳ ಸಾಂಪ್ರದಾಯಿಕ ತಿಂಡಿ-ತಿನಿಸು ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!