
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಜಂತರ್ ಮಂತರ್ನಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆಗೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಶನಿವಾರ ತೆರೆ ಎಳೆದಿದೆ. ಕೇಂದ್ರ ಸರ್ಕಾರದೊಂದಿಗೆ ನಡೆದ ಮೂರು ಸುತ್ತಿನ ಮಾತುಕತೆಯಲ್ಲಿ ತಮ್ಮ ಬಹುತೇಕ ಎಲ್ಲ ಪ್ರಮುಖ ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡಿರುವುದಾಗಿ ಪಕ್ಷದ ನಾಯಕರು ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ ಸಭೆಯ ಬಳಿಕ ಮಾತನಾಡಿದ ಸಿಜೆಪಿ ರಾಷ್ಟ್ರೀಯ ವಕ್ತಾರ ಆಶುತೋಷ್ ರಂಕಾ, “ನಮ್ಮ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಆದ್ದರಿಂದ ಪ್ರತಿಭಟನೆಯನ್ನು ತಕ್ಷಣವೇ ಅಂತ್ಯಗೊಳಿಸಿ ಎಲ್ಲರೂ ಶಾಂತಿಯುತವಾಗಿ ಮನೆಗಳಿಗೆ ಮರಳಬೇಕು” ಎಂದು ಕರೆ ನೀಡಿದರು.
ಸಿಜೆಪಿಯ ಮತ್ತೊಬ್ಬ ವಕ್ತಾರ ಸೌರವ್ ದಾಸ್ ಮಾತನಾಡಿ, ಸರ್ಕಾರದ ಭರವಸೆಯ ಮೇಲೆ ಸದ್ಭಾವನೆಯ ಸಂಕೇತವಾಗಿ ಪ್ರತಿಭಟನೆ ಹಿಂಪಡೆಯಲಾಗುತ್ತಿದೆ ಎಂದರು.
ಪ್ರಮುಖ ಬೇಡಿಕೆಗಳು ಪ್ರತಿಭಟನಾಕಾರರು ಮುಂದಿಟ್ಟಿದ್ದ ಪ್ರಮುಖ ಬೇಡಿಕೆಗಳು:
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ.
ಪ್ರತಿಭಟನಾಕಾರರ ವಿರುದ್ಧ ದಾಖಲಾದ ಎಲ್ಲಾ ಎಫ್ಐಆರ್ಗಳನ್ನು ಹಿಂಪಡೆಯುವುದು ಹಾಗೂ ಹೊಸ ಪ್ರಕರಣ ದಾಖಲಿಸದಿರುವುದು.ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಂತ್ರಸ್ತರ ಕುಟುಂಬಗಳಿಗೆ ₹1 ಕೋಟಿ ಪರಿಹಾರ ನೀಡುವುದು.ಧರ್ಮೇಂದ್ರ ಪ್ರಧಾನ್ ಈಗಾಗಲೇ ರಾಜೀನಾಮೆ ನೀಡಿರುವುದರಿಂದ ಮೊದಲ ಬೇಡಿಕೆ ಈಡೇರಿದೆ ಎಂದು ಸಿಜೆಪಿ ತಿಳಿಸಿದೆ.ಎಫ್ಐಆರ್ ಹಿಂಪಡೆಯುವ ಭರವಸೆದೆಹಲಿ ಸೇರಿದಂತೆ ಬಿಜೆಪಿ ಹಾಗೂ ಬಿಜೆಪಿ ಮೈತ್ರಿ ಸರ್ಕಾರಗಳಿರುವ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಸರ್ಕಾರ ಸಕಾರಾತ್ಮಕ ಭರವಸೆ ನೀಡಿದೆ.
ದೆಹಲಿಯಲ್ಲಿ ದಾಖಲಾಗಿರುವ 15–20 ಎಫ್ಐಆರ್ಗಳ ಪ್ರತಿಗಳನ್ನು ಮೂರು-ನಾಲ್ಕು ದಿನಗಳಲ್ಲಿ ಒದಗಿಸುವುದಾಗಿ ತಿಳಿಸಿರುವುದಾಗಿ ಸಿಜೆಪಿ ಹೇಳಿದೆ.
ಪರಿಹಾರ ಕುರಿತು ಸರ್ಕಾರದ ಭರವಸೆ
ನೀಟ್ ಪ್ರಕರಣದ ಸಂತ್ರಸ್ತರ ಕುಟುಂಬಗಳಿಗೆ ನಿಯಮಾವಳಿಗಳ ವ್ಯಾಪ್ತಿಯಲ್ಲಿ ಸಾಧ್ಯವಾಗುವ ಗರಿಷ್ಠ ಗೌರವಧನ ಅಥವಾ ಪರಿಹಾರ ನೀಡಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ ಎಂದು ಆಶುತೋಷ್ ರಂಕಾ ತಿಳಿಸಿದ್ದಾರೆ.ನಡ್ಡಾ ಹೇಳಿದ್ದೇನು?ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮಾತನಾಡಿ, ಪ್ರತಿಭಟನಾಕಾರರು ಮುಂದಿಟ್ಟಿದ್ದ ಬಹುತೇಕ ಎಲ್ಲ ಬೇಡಿಕೆಗಳನ್ನು ಸರ್ಕಾರ ಸಹಾನುಭೂತಿ ಹಾಗೂ ಸಕಾರಾತ್ಮಕ ಮನೋಭಾವದಿಂದ ಪರಿಗಣಿಸಿದೆ ಎಂದು ಹೇಳಿದರು. ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದ ಸಿಜೆಪಿಯ ಐದು ಅಂಶಗಳ ಪ್ರಸ್ತಾವನೆಯನ್ನು ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದರು.
ಅಲ್ಲದೆ, ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರತೀಕಾರದ ಕ್ರಮ ಕೈಗೊಳ್ಳುವುದಿಲ್ಲ ಹಾಗೂ ಪರಿಹಾರ ನೀಡುವ ವಿಷಯದಲ್ಲೂ ಸರ್ಕಾರ ಮಾನವೀಯ ದೃಷ್ಟಿಕೋನದಿಂದ ನಡೆದುಕೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದರು.








