Thursday, July 30, 2026
spot_imgspot_img
spot_imgspot_img

ನೆಲಮಂಗಲ: ಶಾಲೆಗೆ ತೆರಳುವಾಗ ಥಾರ್‌ ಡಿಕ್ಕಿ – 10 ವರ್ಷದ ಬಾಲಕಿ ಸ್ಥಳದಲ್ಲೇ ಸಾವು

- Advertisement -
- Advertisement -

ನೆಲಮಂಗಲ: ತನ್ನ ದೊಡ್ಡಮ್ಮನ ಜೊತೆಗೆ ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೀರವಾರ ಗ್ರಾಮದ ಬಳಿ ನಡೆದಿದ್ದು 10 ವರ್ಷದ ಲಿಖಿತಾ ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ಲಿಖಿತ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ತಾಯಿ ತಿಂಡಿ ಮಾಡಿಸಿ ಕೆಲಸಕ್ಕೆ ತೆರಳಿದ್ದಾರೆ. ನಂತರ ಲಿಖಿತಾ ತನ್ನ ದೊಡ್ಡಮ್ಮನ ಜೊತೆಗೆ ಶಾಲೆಗೆ ತೆರಳುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಲಿಖಿತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಇನ್ನೂ ನೆಲಮಂಗಲ ಮಾರ್ಗದಿಂದ ಕುಣಿಗಲ್ ಕಡೆ ಸಾಗುತ್ತಿದ್ದ ಕಾರು, ಚಾಲಕನ ನಿರ್ಲಕ್ಷ್ಯದಿಂದ ವೇಗವಾಗಿ ಬಂದು ಡಿಕ್ಕಿಯಾಗಿದೆ. ಘಟನೆಯಲ್ಲಿ ಲಿಖಿತಾಳ ದೊಡ್ಡಮ್ಮ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!