Thursday, July 30, 2026
spot_imgspot_img
spot_imgspot_img

ಪುತ್ತೂರು:ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ

- Advertisement -
- Advertisement -

ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ

ಪುತ್ತೂರು: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಇಂದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಪುತ್ತೂರಿಗೆ ಆಗಮಿಸಿದ ಬಿ.ಎಲ್. ಸಂತೋಷ್ ಅವರನ್ನು ಬಿಜೆಪಿ ಕಚೇರಿ ಮುಂಭಾಗದಲ್ಲಿ ಪಕ್ಷದ ಮುಖಂಡರು ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷ ಸಂಘಟನೆ ಬಲವರ್ಧನೆ, ಸಂಘಟನಾ ಚಟುವಟಿಕೆಗಳು ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಸುನಿಲ್ ಆಳ್ವ ಹಾಗೂ ಪ್ರಸನ್ನ ಮಾರ್ತಾ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಜಿಲ್ಲಾ ಹಾಗೂ ಪುತ್ತೂರು ಮಂಡಲದ ಪದಾಧಿಕಾರಿಗಳು ಮತ್ತು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!