- Advertisement -
- Advertisement -



ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚೌಹಾಣ್ ಅವರು ಗುರುವಾರ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ಪದ್ಮನಾಭ ಭಟ್ ಅವರು ಪ್ರಸಾದ ನೀಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ರವೀಂದ್ರ ಚೌಹಾಣ್ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ವೆಂಕಟೇಶ್ ನಾವಡ, ಯಶವಂತ ಪೊಳಲಿ, ಸುಪ್ರೀತ್ ಆಳ್ವ, ಪುರುಷೋತ್ತಮ್ ಶೆಟ್ಟಿ ವಾಮದಪದವು, ಸಚಿನ್ ಅಡಪ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ಪಿ. ಚಂದ್ರಮೋಹನ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
- Advertisement -








