
ಮಂಗಳೂರು, ಜು.30: ಲೋಕಸಭೆಯ ವಿಪಕ್ಷ ನಾಯಕ Rahul Gandhi ಅವರ ವಿರುದ್ಧ ಅವಹೇಳನಕಾರಿ ಹಾಗೂ ದ್ವೇಷ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಶಾಸಕ Yashpal Suvarna ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ B. Ramanath Rai ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಗುರುವಾರ ಮಂಗಳೂರಿನ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ Jawaharlal Nehru ಹಾಗೂ Indira Gandhi ಅವರ ಕುಟುಂಬದ ಕೊಡುಗೆ ಅಪಾರವಾಗಿದೆ. ಅಂತಹ ಕುಟುಂಬದ ಹಿನ್ನೆಲೆಯುಳ್ಳ ರಾಹುಲ್ ಗಾಂಧಿ ಅವರ ಕುಟುಂಬವನ್ನು ಧ್ವಂಸ ಮಾಡುತ್ತೇವೆ ಎಂಬ ರೀತಿಯ ಹೇಳಿಕೆ ನೀಡಿರುವುದು ಖಂಡನೀಯ ಎಂದು ಹೇಳಿದರು.ನೀಟ್ ಹಗರಣದಲ್ಲಿ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿ ರಾಹುಲ್ ಗಾಂಧಿ ಅವರು ಸಂಸತ್ತಿನ ಒಳಗೂ ಹೊರಗೂ ಹೋರಾಟ ನಡೆಸಿದ್ದು, ವಿಪಕ್ಷ ನಾಯಕನಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಕುರಿತು ಪ್ರತಿಕ್ರಿಯಿಸಿದ ರಮಾನಾಥ ರೈ, “ನಿನ್ನೆ-ಮೊನ್ನೆ ಪಕ್ಷಕ್ಕೆ ಬಂದವರು ಅಧ್ಯಕ್ಷರಾಗುವುದು ಸೂಕ್ತವಲ್ಲ. ಪಕ್ಷಕ್ಕಾಗಿ ದೀರ್ಘಕಾಲ ದುಡಿದ ಹಿರಿಯ, ನಿಷ್ಠಾವಂತ ಹಾಗೂ ನೈಜ ಕಾರ್ಯಕರ್ತರಿಗೆ ಅವಕಾಶ ನೀಡಬೇಕು” ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.








