- Advertisement -
- Advertisement -
ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಬಸ್ ನಿಲ್ದಾಣದಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಏಳು ನಾಗರಿಕರು ಗಾಯಗೊಂಡಿದ್ದಾರೆ.
“ಪುಲ್ವಾಮಾದ ತ್ರಾಲ್ನಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಏಳು ನಾಗರಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ನಾಗರಿಕರ ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ”ಎಂದು ಜಮ್ಮು ಕಾಶ್ಮೀರದ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
- Advertisement -