Saturday, August 1, 2026
spot_imgspot_img
spot_imgspot_img

ಪುತ್ತೂರು-ಉಪ್ಪಿನಂಗಡಿ, ಸುಬ್ರಹ್ಮಣ್ಯ ರಸ್ತೆಗಳ ಹೊಂಡಗಳಿಗೆ ತಕ್ಷಣ ದುರಸ್ತಿ: ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಪುತ್ತಿಲ ಮನವಿ

- Advertisement -
- Advertisement -

.

ಪುತ್ತೂರು, ಆ.1: ಪುತ್ತೂರು-ಉಪ್ಪಿನಂಗಡಿ ರಸ್ತೆಯ 34ನೇ ನೆಕ್ಕಿಲಾಡಿ, ವನಸುಮ ನರ್ಸರಿ ಸಮೀಪ ನಿರ್ಮಾಣವಾಗಿರುವ ಅಪಾಯಕಾರಿ ಹೊಂಡಗಳನ್ನು ಕೂಡಲೇ ಮುಚ್ಚುವಂತೆ ಹಾಗೂ ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳ ಭಾಗದಲ್ಲಿ ಉಂಟಾಗಿರುವ ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆ (PWD) ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಲಾಗಿದೆ.

ಬೆದ್ರಾಳ ರಸ್ತೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಮೂರು ಬಾರಿ ಇಂಟರ್ಲಾಕ್ ದುರಸ್ತಿ ಕಾಮಗಾರಿ ನಡೆಸಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕಳೆದ 15 ದಿನಗಳಿಂದ ರಸ್ತೆಯಲ್ಲಿರುವ ಬ್ಯಾರಿಕೇಡ್ ತೆರವುಗೊಳಿಸದೆ ಇಟ್ಟಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಮಳೆಗಾಲ ಮುಗಿದ ಬಳಿಕ ಇಂಟರ್ಲಾಕ್ ತೆರವುಗೊಳಿಸಿ ಕಾಂಕ್ರೀಟ್ ಅಥವಾ ಡಾಂಬರು ರಸ್ತೆ ನಿರ್ಮಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ.ಬೆದ್ರಾಳದಿಂದ ಸರ್ವೆವರೆಗೆ ರಸ್ತೆಯಲ್ಲಿ ಬಿದ್ದಿರುವ ಅಪಾಯಕಾರಿ ಹೊಂಡಗಳನ್ನು ಕೂಡಲೇ ಮುಚ್ಚಬೇಕು. ಅಪೂರ್ಣವಾಗಿರುವ ಮೋರಿ ಕಾಮಗಾರಿಯಿಂದ ಮಳೆ ನೀರು ರಸ್ತೆಯ ಮೇಲೆ ಹರಿದು ರಸ್ತೆ ಮತ್ತಷ್ಟು ಹಾನಿಗೊಳಗಾಗುತ್ತಿದೆ.

ಹೀಗಾಗಿ ರಸ್ತೆ ಬದಿಯ ಮೋರಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಒತ್ತಾಯಿಸಲಾಗಿದೆ.ಮಳೆ ಬಂದಾಗ ಹೊಂಡಗಳಲ್ಲಿ ನೀರು ತುಂಬಿಕೊಳ್ಳುವುದರಿಂದ ವಾಹನ ಸವಾರರಿಗೆ ಹೊಂಡಗಳು ಗೋಚರಿಸದೆ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ರಾಜೇಶ್ ರೈ ಅವರೊಂದಿಗೆ ಚರ್ಚಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರದಲ್ಲೇ ಹೊಂಡಗಳನ್ನು ಮುಚ್ಚಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಲಾಗಿದೆ.ಈ ಸಂದರ್ಭದಲ್ಲಿ ಟ್ರಸ್ಟ್‌ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹಾಗೂ ಪದಾಧಿಕಾರಿಗಳಾದ ಉಮೇಶ್ ಕೋಡಿಬೈಲು, ಪ್ರಶಾಂತ್ ನೆಕ್ಕಿಲಾಡಿ, ರಾಜು ಶೆಟ್ಟಿ ಮತ್ತು ಮನೀಶ್ ಕುಲಾಲ್ ಉಪಸ್ಥಿತರಿದ್ದರು.

- Advertisement -

Related news

error: Content is protected !!