Monday, August 3, 2026
spot_imgspot_img
spot_imgspot_img

ಡೇಟಿಂಗ್ ಆ್ಯಪ್‌ನಲ್ಲಿ ಸ್ನೇಹದ ನಾಟಕ; ಸಲಿಂಗ ಸಂಬಂಧದ ಆಮಿಷವೊಡ್ಡಿ ಯುವಕರ ದರೋಡೆ – ಬೆಂಗಳೂರಿನಲ್ಲಿ 6 ಮಂದಿ ಬಂಧನ

- Advertisement -
- Advertisement -

ಬೆಂಗಳೂರು: ಡೇಟಿಂಗ್ ಆ್ಯಪ್‌ಗಳ ಮೂಲಕ ನಕಲಿ ಖಾತೆಗಳನ್ನು ಸೃಷ್ಟಿಸಿ ಸಲಿಂಗ ಸಂಬಂಧದ ಆಮಿಷವೊಡ್ಡಿ ಯುವಕರನ್ನು ನಿರ್ಜನ ಪ್ರದೇಶಗಳಿಗೆ ಕರೆಸಿ ಹಲ್ಲೆ ನಡೆಸಿ ದರೋಡೆ ಮಾಡುತ್ತಿದ್ದ ಭೀಕರ ಗ್ಯಾಂಗ್‌ನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ. ಬಂಧಿತರಿಂದ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತ ಆರೋಪಿಗಳನ್ನು ಆನೇಕಲ್ ಮೂಲದ ವಿಶಾಲ್ (18), ಅಜಯ್ (19), ಸೂರ್ಯ (19) ಹಾಗೂ ಸಂಜಯ್ (22) ಎಂದು ಗುರುತಿಸಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇಬ್ಬರು ಅಪ್ರಾಪ್ತ ಬಾಲಕರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಪ್ರಸಿದ್ಧ ಡೇಟಿಂಗ್ ಆ್ಯಪ್‌ಗಳಲ್ಲಿ ಸುಂದರ ಯುವಕರ ಹೆಸರಿನಲ್ಲಿ ನಕಲಿ ಪ್ರೊಫೈಲ್‌ಗಳನ್ನು ಸೃಷ್ಟಿಸಿ, ಸಲಿಂಗ ಸಂಬಂಧದಲ್ಲಿ ಆಸಕ್ತಿ ಹೊಂದಿರುವ ಯುವಕರೊಂದಿಗೆ ಕೆಲವು ದಿನಗಳ ಕಾಲ ಸ್ನೇಹ ಬೆಳೆಸಿ ವಿಶ್ವಾಸ ಗಳಿಸುತ್ತಿದ್ದರು. ಬಳಿಕ ಭೇಟಿಯ ನೆಪದಲ್ಲಿ ಆನೇಕಲ್ ಹಾಗೂ ಜಿಗಣಿ ಸುತ್ತಮುತ್ತಲಿನ ನಿರ್ಜನ ಪ್ರದೇಶಗಳಿಗೆ ಕರೆಸಿಕೊಳ್ಳುತ್ತಿದ್ದರು.ಯುವಕರು ಸ್ಥಳಕ್ಕೆ ಬಂದ ಕೂಡಲೇ ಗ್ಯಾಂಗ್ ಸದಸ್ಯರು ಅವರನ್ನು ಸುತ್ತುವರಿದು ಹಲ್ಲೆ ನಡೆಸುತ್ತಿದ್ದರು. ನಂತರ ಅವರಿಂದ ಹಣ, ಮೊಬೈಲ್ ಫೋನ್ ಹಾಗೂ ಚಿನ್ನಾಭರಣಗಳನ್ನು ಕಸಿದುಕೊಂಡು ಪರಾರಿಯಾಗುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಈ ಗ್ಯಾಂಗ್‌ನಿಂದ ದರೋಡೆಗೆ ಒಳಗಾದ ಯುವಕನೊಬ್ಬ ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಪೊಲೀಸರು ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.ಡೇಟಿಂಗ್ ಆ್ಯಪ್‌ಗಳ ಮೂಲಕ ಅಪರಿಚಿತರನ್ನು ಭೇಟಿಯಾಗುವಾಗ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಹನಿಟ್ರಾಪ್ ಹಾಗೂ ಸೈಬರ್ ಸಂಬಂಧಿತ ವಂಚನೆಗಳ ಬಗ್ಗೆ ಜಾಗರೂಕರಾಗಿರುವಂತೆ ಪೊಲೀಸರು ಮನವಿ ಮಾಡಿದ್ದಾರೆ.

- Advertisement -

Related news

error: Content is protected !!