Monday, August 3, 2026
spot_imgspot_img
spot_imgspot_img

15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ – ಖಾಸಗಿ ಅಂಗಕ್ಕೆ ರಾಡ್ ಹಾಕಿ ಬರ್ಬರ ಹತ್ಯೆ

- Advertisement -
- Advertisement -

ಐವರನ್ನು ವಶಕ್ಕೆ ಪಡೆದ ಪೊಲೀಸರು

ಗುವಾಹಟಿ: 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಖಾಸಗಿ ಅಂಗಕ್ಕೆ ರಾಡ್ ಹಾಕಿ ಅತ್ಯಂತ ಭೀಕರವಾಗಿ ಹತ್ಯೆಮಾಡಿರುವ ಘಟನೆ ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ನಡೆದಿದೆ.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಕಾರ, ಕಟ್ಲಿಚೆರಾ ಪೊಲೀಸ್ ಠಾಣೆ ವ್ಯಾಪ್ತಿಯ ಅಲೋಯಿಚೋರಾ ಪ್ರದೇಶದಲ್ಲಿ ಶನಿವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಬಾಲಕಿ ತನ್ನ ಕುಟುಂಬದವರೊಂದಿಗೆ ಸಂಬಂಧಿಕರ ಮನೆಯಲ್ಲಿ ನಡೆದ ಔತಣಕೂಟಕ್ಕೆ ತೆರಳಿದ್ದಳು. ಆದರೆ, ಸಂಬಂಧಿಕರೊಬ್ಬರೊಂದಿಗೆ ಮಾತಿನ ಚಕಮಕಿ ನಡೆದ ಹಿನ್ನೆಲೆಯಲ್ಲಿ ಆಕೆ ಒಬ್ಬಳೇ ಮನೆಗೆ ಹಿಂದಿರುಗಿದ್ದಳು.

ರಾತ್ರಿ ಕುಟುಂಬದವರು ಮನೆಗೆ ಬಂದಾಗ ಬಾಲಕಿ ರಕ್ತದ ಮಡುವಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯ ಮುಖವನ್ನು ತೀವ್ರವಾಗಿ ಜಜ್ಜಲಾಗಿದ್ದು, ದೇಹದ ಮೇಲೂ ಗಂಭೀರ ಗಾಯಗಳಿದ್ದ ಕಾರಣ ಕುಟುಂಬದವರಿಗೆ ಆಕೆಯನ್ನು ಗುರುತಿಸಲು ಕೂಡ ಕಷ್ಟವಾಗಿತ್ತು ಎಂದು ಮೂಲಗಳು ತಿಳಿಸಿವೆ.

ಬಾಲಕಿಯ ಮೇಲೆ ಮೊದಲು ಅತ್ಯಾಚಾರ ಎಸಗಿ ಬಳಿಕ ಕ್ರೂರವಾಗಿ ಹತ್ಯೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ, ಈ ಕುರಿತು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬುದು ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಆಕ್ರೋಶಗೊಂಡ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ-6 ಅನ್ನು ತಡೆದು ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಅವರು ಆಗ್ರಹಿಸಿದರು.

ಜಿಲ್ಲೆಯ ಹಿರಿಯ ಪೊಲೀಸ್ ಅಧೀಕ್ಷಕ ಅಮಿತಾಭ್ ಸಿನ್ಹಾ ಮಾತನಾಡಿ, ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕುಟುಂಬದವರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಅದನ್ನು ದೃಢೀಕರಿಸಬಹುದು. ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!