- Advertisement -
- Advertisement -



ನವದೆಹಲಿ: ದೇಶಾದ್ಯಂತ ರಸ್ತೆಗಳಿರುವ ಪ್ರತಿಯೊಂದು ಕಡೆಯೂ ಪಾದಚಾರಿಗಳಿಗೆ ಪ್ರತ್ಯೇಕ ಹಾಗೂ ಅತಿಕ್ರಮಣ-ಮುಕ್ತ ಸ್ಥಳಗಳನ್ನು ಖಚಿತಪಡಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಕಠಿಣ ಆದೇಶ ನೀಡಿದೆ.
ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರಿದ್ದ ಪೀಠವು ಈ ಆದೇಶ ನೀಡಿದ್ದು, ಪಾದಚಾರಿಗಳು ಯಾವುದೇ ಮೋಟಾರು ವಾಹನಗಳ ಬೆದರಿಕೆಯಿಲ್ಲದೆ ಮುಕ್ತವಾಗಿ ಸಂಚರಿಸುವ ವಾತಾವರಣ ನಿರ್ಮಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದೆ.
ಪಾದಚಾರಿ ಮಾರ್ಗ ರಚಿಸಲು ಭಾರಿ ಹೂಡಿಕೆ ಅಥವಾ ಕಾಂಕ್ರೀಟ್ ನಿರ್ಮಾಣಗಳೇ ಬೇಕಿಲ್ಲ. ಕನಿಷ್ಠ ಪಕ್ಷ ಹಗ್ಗಗಳು ಅಥವಾ ಬಣ್ಣದ ಲೈನ್‌ಗಳನ್ನು ಬಳಸಿ ರಸ್ತೆಯ ಪಕ್ಕದಲ್ಲಿ ಪಾದಚಾರಿ ಜಾಗವನ್ನು ಸ್ಪಷ್ಟವಾಗಿ ಪ್ರತ್ಯೇಕಿಸಿ ಎಂದು ಪೀಠ ತಿಳಿಸಿದೆ.
ಅಧಿಕಾರಿಗಳಿಗೆ ಈ ಕುರಿತು ಸ್ಪಷ್ಟ ನಿರ್ದೇಶನ ನೀಡಲು ಕೇಂದ್ರ ಸರ್ಕಾರಕ್ಕೆ ನ್ಯಾಯಪೀಠವು ಎರಡು ವಾರಗಳ ಕಾಲಾವಕಾಶ ನೀಡಿದ್ದು, ಮುಂದಿನ ವಿಚಾರಣೆಯನ್ನು ಎರಡು ವಾರಗಳ ನಂತರ ಮುಂದೂಡಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.
- Advertisement -








