Monday, August 3, 2026
spot_imgspot_img
spot_imgspot_img

ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ: ಆ.4ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..!

- Advertisement -
- Advertisement -

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಸ್ಟ್ 4, 2026 (ಮಂಗಳವಾರ) ರಂದು ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (10ನೇ ತರಗತಿವರೆಗೆ ) ಹಾಗೂ ಎಲ್ಲಾ ವಸತಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (12ನೇ ತರಗತಿವರೆಗೆ), ಎಲ್ಲಾ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು ಮತ್ತು ವಸತಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

- Advertisement -

Related news

error: Content is protected !!