- Advertisement -
- Advertisement -


ಯಾದಗಿರಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿಯ ಕಡೆಚೂರು ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಹೈದರಾಬಾದ್ ಮೂಲದ ಕಂಪನಿಯಲ್ಲಿ ಘಟನೆ ನಡೆದಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದೆ. ಅವಘಡದಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಕಡೇಚೂರು-ಬಾಡಿಹಾಳ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸ್ಕ್ರಬರ್ ಗ್ಯಾಸ್ ಸೋರಿಕೆಯಾಗಿದೆ. ಅಪಾಯದ ಕೆಮಿಕಲ್ ಕೆಟ್ಟ ವಾಸನೆಯಿಂದ ಉಸಿರುಗಟ್ಟಿ ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಮೃತರು ಮಧ್ಯಪ್ರದೇಶ ಹಾಗೂ ಆಂಧ್ರಪ್ರದೇಶ ಮೂಲದವರು.
ಕಾರ್ಮಿಕರ ದುರ್ಮರಣದಿಂದ ಫ್ಯಾಕ್ಟರಿ ಸ್ಥಗಿತಗೊಳಿಸಲಾಗಿದೆ. ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಭೇಟಿ ಪರಿಶೀಲನೆ ನಡೆಸಿದ್ದಾರೆ.
- Advertisement -








