- Advertisement -
- Advertisement -



ಮಂಗಳೂರು: ನಗರದ ಗುಜ್ಜರಕೆರೆ ಚಹಾ ಅಂಗಡಿ ಬಳಿ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಐದಾರು ಮಂದಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಪ್ರಾಥಮಿಕವಾಗಿ ಇದು ರ್ಯಾಗಿಂಗ್ ಪ್ರಕರಣದಂತೆ ಕಂಡುಬಂದಿದ್ದು, ಘಟನೆ ಕುರಿತು ಪೊಲೀಸರು ಮಾಹಿತಿ ಪಡೆದು, ಸಂತ್ರಸ್ತ ವಿದ್ಯಾರ್ಥಿಗಳ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ಈ ಸಂಬಂಧ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -








