ಸಾರ್ವಜನಿಕರು, ವಿದ್ಯಾಥಿಗಳು, ಮಾಜಿ ಸೈನಿಕರು, ಸಂಘ-ಸಂಸ್ಥೆಗಳ ಸದಸ್ಯರು ಭಾಗವಹಿಸಬೇಕು
ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮಾಹಿತಿ
ಪುತ್ತೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 7 ರಂದು ಗುರುವಾರ ಸಂಜೆ 3:00 ಗಂಟೆಗೆ ಪುತ್ತೂರಿನಲ್ಲಿ ಬೃಹತ್ ‘ತಿರಂಗ ಯಾತ್ರೆ’ ನಡೆಯಲಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಿಂದ ಯಾತ್ರೆಗೆ ಚಾಲನೆ ನೀಡಲಾಗುವುದು. ಅಲ್ಲಿಂದ ಹೊರಟು ಕಿಲ್ಲೆ ಮೈದಾನದವರೆಗೆ ಸಾಗಿ ಬಳಿಕ ಸಾರ್ವಜನಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಈ ದೇಶದ ಪ್ರಧಾನಿ ನರೇಂದ್ರ ಮೋದಿಜಿಯವರು ಯಾವಾಗ ಈ ದೇಶದ ಚುಕ್ಕಾಣಿ ಹಿಡಿದರು ಅವತ್ತಿಂದ ಹರ್ ಗರ್ ತಿರಂಗ ಅನ್ನುವಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮುಖಾಂತರ ಸುಮಾರು 23ಕೋಟಿ ಮನೆಗಳಲ್ಲಿ ತಿರಂಗವನ್ನು ಹಾರಿಸುವ ಮೂಲಕ ದೇಶ ಭಕ್ತಿಯ ಉದ್ದೀಪನವನ್ನ ಯುವಕರಲ್ಲಿ ಮೂಡಿಸುವಂತಹ ಕಾರ್ಯವನ್ನು ಅವರು ಮಾಡಿದ್ದಾರೆ, ಗಡಿಯಲ್ಲಿ ಪ್ರಾಣತ್ಯಾಗ ಮಾಡುವ ಸೈನಿಕರಿಗೆ ಮತ್ತು ದೇಶಕ್ಕೆ ಅನ್ನ ನೀಡುವ ರೈತರಿಗೆ ಗೌರವ ಸಲ್ಲಿಸುವುದು ಹಾಗೂ ಪ್ರತಿ ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸೂಚಿಸುವುದು ಇದರ ಗುರಿಯಾಗಿದೆ. ಯುವಕರಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸುವುದು ಮತ್ತು ದೇಶದ ಬಗ್ಗೆ ಹೆಮ್ಮೆಯನ್ನು ಮೂಡಿಸುವುದು ಈ ಯಾತ್ರೆಯ ಪ್ರಮುಖ ಉದ್ದೇಶವಾಗಿದೆ.
ಈ ಕಾರ್ಯಕ್ರಮದಲ್ಲಿ 5 ಸಾವಿರ ಸಂಖ್ಯೆಯಲ್ಲಿ ಯುವಕರು ಸೇರುವ ರೀತಿಯಲ್ಲಿ ಪ್ರಯತ್ನ ಆಗ್ತಾ ಇದೆ, ಸಾರ್ವಜನಿಕರು, ವಿದ್ಯಾಥಿಗಳು, ಮಾಜಿ ಸೈನಿಕರು, ಸಂಘ-ಸಂಸ್ಥೆಗಳ ಸದಸ್ಯರು ಭಾಗವಹಿಸಬೇಕುಇದು ಯಾವುದೇ ರಾಜಕೀಯ ಪಕ್ಷದ ಲೇಬಲ್ ಇಲ್ಲದ, ರಾಜಕೀಯ ರಹಿತ ಕಾರ್ಯಕ್ರಮವಾಗಿದೆ. ತ್ರಿವರ್ಣ ಧ್ವಜದ ಅಡಿಯಲ್ಲಿ ಎಲ್ಲರೂ ಒಂದಾಗಿ ಸೇರಿ ದೇಶದ ಒಗ್ಗಟ್ಟನ್ನು ಸಾರುವುದು ಇದರ ಉದ್ದೇಶ ಎಂದು ಕಿಶೋರ್ ಕುಮಾರ್ ತಿಳಿಸಿದ್ದಾರೆ.
ಪ್ರಮುಖ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಸಚಿವ ಸಿ.ಟಿ. ರವಿ ಅವರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸ್ಥಳೀಯ ಜಿಲ್ಲೆಯ ಬಿಜೆಪಿ ಹಿರಿಯ ಮುಖಂಡರು ಮತ್ತು ಜಿಲ್ಲಾಧ್ಯಕ್ಷರು ಉಪಸ್ಥಿತರಿರಲಿದ್ದಾರೆ.ಯುವಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಮಕ್ಕಳಿಂದ ಹಿಡಿದು ಹಿರಿಯರವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕಿಶೋರ್ ಕುಮಾರ್ ವಿನಂತಿಸಿದ್ದಾರೆ.
ದೇಶಭಕ್ತಿಯನ್ನು ಜಾಗೃತಗೊಳಿಸುವ ಉದ್ದೇಶದಿಂದ ಈ ತಿರಂಗ ಯಾತ್ರೆಯನ್ನು ಆಯೋಜಿಸಲಾಗಿದ್ದು, ಎಲ್ಲರೂ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ಪಾಲ್ಗೊಳ್ಳುವಂತೆ ಆಹ್ವಾನ ನೀಡಿದರು.








