- Advertisement -
- Advertisement -




ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ.
ಬಂಧಿತನನ್ನು ಸುಳ್ಯ ತಾಲೂಕಿನ ಕಲ್ಲುಮುಟ್ಲು ನಿವಾಸಿ ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಈತ ಪ್ರಕರಣದ ಆರೋಪಿಗಳು ತಲೆಮರೆಸಿಕೊಳ್ಳಲು ನೆರವು ನೀಡಿದ್ದ ಆರೋಪದಡಿ 13ನೇ ಆರೋಪಿಯಾಗಿ ಗುರುತಿಸಲ್ಪಟ್ಟಿದ್ದಾನೆ.
ಇತ್ತೀಚೆಗೆ, ಜುಲೈ 11ರಂದು ಎನ್ಐಎ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ನೌಷದ್ ಮತ್ತು ನಾಸೀರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಉಮರ್ ಫಾರೂಕ್ ಕೊಚ್ಚಿಯಲ್ಲಿ ಅಡಗಿರುವ ಮಾಹಿತಿ ಲಭ್ಯವಾಗಿದ್ದು, ಅದರ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.
ಉಮರ್ ಫಾರೂಕ್ ಕೊಚ್ಚಿಯಲ್ಲಿ ವಾಸ್ತವ್ಯ ಹೂಡಿ ಅಲ್ಲಿಯೇ ಉದ್ಯೋಗದಲ್ಲಿದ್ದ ಎನ್ನಲಾಗಿದೆ. ಬಂಧಿತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಎನ್ಐಎ ಮುಂದುವರಿಸಿದೆ ಎಂದು ತಿಳಿದು ಬಂದಿದೆ.
- Advertisement -








