ಪುತ್ತೂರು ಪುರಭವನದಲ್ಲಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ




ಪುತ್ತೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ. 7 ರಂದು ಪುತ್ತೂರಿನಲ್ಲಿ ನಡೆಯಲಿರುವ ಬೃಹತ್ ತಿರಂಗಾ ಯಾತ್ರೆಯ ಸಿದ್ಧತೆಗಳು ಭರದಿಂದ ಸಾಗಿವೆ.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಪುತ್ತೂರು ಪುರಭವನದಲ್ಲಿ ಯಾತ್ರೆಯ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ, ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಓಗೊಟ್ಟು ಈ ಬೃಹತ್ ತಿರಂಗಾ ಯಾತ್ರೆಯನ್ನು ಆಯೋಜಿಸಲಾಗಿದೆ” ಎಂದು ತಿಳಿಸಿದರು. ಪುತ್ತೂರಿನಲ್ಲೇ ಪ್ರಥಮ ಬಾರಿಗೆ ನಡೆಯಲಿರುವ ಈ ಯಾತ್ರೆಯು ಆಗಸ್ಟ್ 7ರಂದು ಸಂಜೆ 3:30ಕ್ಕೆ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಿಂದ ಆರಂಭವಾಗಿ, ಕೋರ್ಟ್ ಮೈದಾನದಲ್ಲಿ ಸಮಾಪ್ತಿಯಾಗಲಿದೆ.
ಈ ಕಾರ್ಯಕ್ರಮದಲ್ಲಿ ಯುವಕರು, ವಿದ್ಯಾರ್ಥಿಗಳು ಮತ್ತು ದೇಶಪ್ರೇಮಿಗಳು ಸೇರಿದಂತೆ 5,000ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಭಾಗವಹಿಸಲಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರು, ಎಲ್ಲ ಜನಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನರೇಂದ್ರ ಮೋದಿಯವರ ಕನಸನ್ನು ನನಸು ಮಾಡೋಣ ಎಂದು ಸತೀಶ್ ಕುಂಪಲ ವಿನಂತಿಸಿದರು.ಈ ಸಂದರ್ಭದಲ್ಲಿ ತಿರಂಗಾ ಯಾತ್ರೆ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.








