Thursday, August 6, 2026
spot_imgspot_img
spot_imgspot_img

ಬಿ.ಸಿ.ರೋಡ್‌ನಲ್ಲಿ ಟಿಪ್ಪರ್-ಸ್ಕೂಟರ್ ಭೀಕರ ಅಪಘಾತ: ಸಹಸವಾರ ಸಾವು, ಚಾಲಕ ವಶಕ್ಕೆ

- Advertisement -
- Advertisement -

ಬಂಟ್ವಾಳ: ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಟಿಪ್ಪರ್ ಮತ್ತು ಸ್ಕೂಟರ್ ನಡುವಿನ ಭೀಕರ ಅಪಘಾತದಲ್ಲಿ ಸ್ಕೂಟರ್‌ನ ಸಹಸವಾರ ಮೃತಪಟ್ಟಿದ್ದು, ಸವಾರ ಗಂಭೀರ ಗಾಯಗೊಂಡಿದ್ದಾರೆ.

ಕಲ್ಲಡ್ಕ ಕಡೆಯಿಂದ ಲೊರೆಟ್ಟೊ ಕಡೆಗೆ ಬರುತ್ತಿದ್ದ KA-19-AF-8073 ನೋಂದಣಿಯ ಟಿಪ್ಪರ್ ವಾಹನವು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಪರಿಣಾಮ, ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ KA-70-H-5059 ನೋಂದಣಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಸ್ಕೂಟರ್ ಸವಾರ ದಯಾನಂದ ಹಾಗೂ ಸಹಸವಾರ ಯಶ್ವಂತ್ ಕುಲಾಲ್ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಮಂಗಳೂರು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಯಶ್ವಂತ್ ಕುಲಾಲ್ ಮೃತಪಟ್ಟಿದ್ದಾರೆ. ದಯಾನಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆಗೆ ಸಂಬಂಧಿಸಿ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟಿಪ್ಪರ್ ಚಾಲಕ ಪಲ್ಲಮಜಲು ನಿವಾಸಿ ಸಲ್ಮಾನ್ ಫಾರುಕ್ (33) ಅವರನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

- Advertisement -

Related news

error: Content is protected !!